‘ಯಡಿಯೂರಪ್ಪ ವಿರುದ್ಧ ದೂರು ಕೊಟ್ಟವರಾರು? ರಾಜ್ಯಪಾಲರನ್ನು ಭೇಟಿಯಾಗಿದ್ಯಾರು? ನೋಟು ಎಣಿಸುವ ಯಂತ್ರ ಇಟ್ಟುಕೊಂಡವರಾರು?’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 13 FEBRUARY 2024

SHIMOGA : ಕೆಲ ವರ್ಷಗಳ ಹಿಂದೆ ಬಿಜೆಪಿಯಲ್ಲಿ ನಾಯಕರು ಇದ್ದರು. ಈಗ ಇರುವುದು ಕೇವಲ ಕಾಂಗರುಗಳು. ಅವರಿಗೆ ತಮ್ಮ ಮಕ್ಕಳಿಗೆ ಸುರಕ್ಷಿತವಾದ ವ್ಯವಸ್ಥೆ ಮಾಡುವುದಷ್ಟೇ ಚಿಂತೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ವ್ಯಂಗ್ಯವಾಡಿದರು.

ಬಿಜೆಪಿಯಲ್ಲಿ ಎಲ್ಲ ನಾಯಕರ ಮಕ್ಕಳಿಗೂ ಅಧಿಕಾರ ಸಿಕ್ಕಿದೆ. ಆದರೆ ನನ್ನ ಮಗನಿಗೆ ಏನೂ ಸಿಕ್ಕಿಲ್ಲ ಎಂಬ ಚಿಂತೆ ಆ ಪಕ್ಷದ ನಾಯಕರೊಬ್ಬರಲ್ಲಿದೆ. ಅವರಿಗೆ ರಾಜಕೀಯದಲ್ಲಿ ಕಳೆದುಹೋಗುತ್ತೇನೆಂಬ ಆತಂಕವಿದೆ. ಹೀಗಾಗಿ ದಿಢೀರ್ ರಾಷ್ಟ್ರಭಕ್ತಿ ಜಾಗೃತವಾಗಿದೆ. ದೇವರು, ದೇಶದ ಹೆಸರಿನಲ್ಲಿ ಅಮಲನ್ನು ಹಚ್ಚಿ ನಿಮಗೆ ದೇಶ ಪ್ರೇಮಿ ಎಂದು ಕರೆಸಿಕೊಳ್ಳು ಹಕ್ಕು ಏನಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ ವಿರುದ್ಧ ದೂರು ಕೊಟ್ಟವರಾರು

ಇತಿಹಾಸವನ್ನು ಅವರು ಒಮ್ಮೆ ಅವಲೋಕಿಸಲಿ. ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ಕೊಟ್ಟವರು ಯಾರು? ರಾಜ್ಯಪಾಲರನ್ನು ಭೇಟಿ ಮಾಡಿದವರು ಯಾರು? ನೋಟು ಎಣಿಸುವ ಯಂತ್ರ ಇಟ್ಟುಕೊಂಡವರು ಯಾರು? ಡಿ.ಕೆ.ಶಿವಕುಮಾರ್‌ಗೆ ಪದೇ ಪದೇ ಜೈಲಿಗೆ ಹೋದವರು ಎಂದು ಹೇಳಲು ಕಾರಣವೇನು ಎಂದು ಟೀಕಿಸಿದರು.

ಬಾಯಿ ತಪ್ಪಿ ಆ ವಾಕ್ಯ ಹೇಳಿರಬಹುದು

ಸಂಸದ ಡಿ.ಕೆ.ಸುರೇಶ್ ದಕ್ಷಿಣ ಭಾರತ ಪ್ರತ್ಯೇಕ ದೇಶವಾಗಬೇಕು ಎಂದು ಹೇಳಿರುವ ನೋವಿನ ಹಿಂದಿನ ಭಾವನೆ ಅರ್ಥ ಮಾಡಿಕೊಳ್ಳಬೇಕು. ಮೇಕೆದಾಟು, ಕಾವೇರಿ, ಮಹದಾಯಿ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನೆರೆ, ಬರ ಪರಿಹಾರದಲ್ಲಿ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಕಡೆಗಣಿಸಿದೆ. ಹೀಗಾಗಿ ಸುರೇಶ್ ಹತಾಶೆಯಿಂದ ಮಾತನಾಡುವ ಭರದಲ್ಲಿ ಬಾಯಿತಪ್ಪಿ ಆ ವಾಕ್ಯ ಹೇಳಿರಬಹುದು ಎಂದು ಆಯನೂರು ಹೇಳಿದರು.

ಜಿಲ್ಲೆಗೂ ಕೇಂದ್ರದಿಂದ ಅನ್ಯಾಯ

ರಾಜ್ಯಕ್ಕೆ ಮಾತ್ರವಲ್ಲ ಜಿಲ್ಲೆಗೂ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ತೀರ್ಥಹಳ್ಳಿಯಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಮಾಡುವುದಾಗಿ ಹೇಳಿದ್ದ ಅಮಿತ್ ಶಾ ಇದುವರೆಗೂ ಅದನ್ನು ಮಾಡಿಲ್ಲ. ತುಮಕೂರು– ಶಿವಮೊಗ್ಗ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಭದ್ರಾವತಿಯ ವಿಐಎಸ್ಎಲ್‌ಗೆ ನೆರವು ಕೊಡುವುದಾಗಿ ಹೇಳಿದ್ದರು. ಕೊನೆಗೂ ಕೊಡಲಿಲ್ಲ ಎಂದರು.

ಇದನ್ನೂ ಓದಿ – ಭದ್ರಾವತಿ ಆಹಾರ ಇಲಾಖೆ ಗೋದಾಮಿನ ಗೋಡೆಗೆ ಭಿತ್ತಿ ಪತ್ರ ಅಂಟಿಸಿ, ಪ್ರತಿಭಟನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 13, 2024

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment