SHIVAMOGGA LIVE NEWS | 14 FEBRUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಮರ ಬಿದ್ದು ಬೈಕ್ನಲ್ಲಿ ತೆರಳಿದ್ದು ಮೂವರು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಮೂವರ ಪ್ರಾಣ ಉಳಿದಿದೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸನ್ಯಾಸಿಕೋಡುಮಗ್ಗಿಯ ಶಫಿ, ಪ್ಯಾರೀಬಿ, ಗೌಸಿಯಾ ಎಂಬುವವರು ಗೋಂದಿ ಚಟ್ನಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ಮರ ಬೈಕ್ ಮೇಲೆ ಬಿದ್ದಿದೆ. ಮರ ಬೀಳುತ್ತಿದ್ದಂತೆ ಬೈಕ್ ಸವಾರರು ಆಯಾತಪ್ಪಿ ಕೆಳಗೆ ಬಿದ್ದಿದ್ದಾರೆ. ಹಿಂಬದಿಯಲ್ಲಿ ಬರುತ್ತಿದ್ದ ಲಾರಿ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ದಿಢೀರ್ ಬ್ರೇಕ್ ಹಾಕಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ – ಹರಿದ್ರಾವತಿ, ಎಂ ಗುಡ್ಡೆಕೊಪ್ಪ ಭಾಗದಲ್ಲಿ ಪೊಲೀಸರ ದಾಳಿ, ಐದು ಲಾರಿಗಳು ವಶಕ್ಕೆ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






