SHIVAMOGGA LIVE NEWS | 15 FEBRUARY 2024
SHIMOGA : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು.
![]() |
ವಿವಿಧ ಕ್ಷೇತ್ರಗಳಲ್ಲಿ 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ ಲಭ್ಯವಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ https://skillconnect.kaushalkar.com ಲಿಂಕ್ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-255294, ಮೊ.ಸಂ: 8310285799 ಅಥವಾ ಸಹಾಯವಾಣಿ ಸಂಖ್ಯೆ 18005999918 (ವಿಸ್ತರಣಾ ಸಂಖ್ಯೆ – 4) ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್.ಹೆಚ್.ಎಂ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದವರೇ ನಿರ್ಮಿಸಿ, ನಿರ್ದೇಶಿಸಿರುವ ಶಾಖಾಹಾರಿ ಸಿನಿಮಾ ಬಿಡುಗಡೆ ಡೇಟ್ ಘೋಷಣೆ, ಹೇಗಿದೆ ಚಿತ್ರ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200