ಪೊಲೀಸ್‌ ಸಿಬ್ಬಂದಿ ಮನೆಯಲ್ಲಿ ಬೀರು ತೆಗೆದ ಕುಟುಂಬದವರಿಗೆ ಕಾದಿತ್ತು ಆಘಾತ, ಏನಾಗಿತ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 FEBRUARY 2024

BHADRAVATHI : ನಕಲಿ ಕೀ ಬಳಸಿ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಪೊಲೀಸ್‌ ಸಿಬ್ಬಂದಿಯೊಬ್ಬರ ಮನೆಯ ಬಾಗಿಲು ತೆಗೆದು, ಬೀರುವಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಹಣ, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಭದ್ರಾವತಿ ಹನುಮಂತನಗರದಲ್ಲಿರುವ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ.

ಪೊಲೀಸ್‌ ಸಿಬ್ಬಂದಿ ಕುಬೇರಪ್ಪ ಎಂಬುವವರ ಮನೆಗೆ ನಕಲಿ ಕೀ ಬಳಸಿ ಒಳ ನುಗ್ಗಿರುವ ಕಳ್ಳರು, ಅಡಿಕೆ ಮಾರಾಟದಿಂದ ಬಂದಿದ್ದ 5 ಲಕ್ಷ ರೂ. ನಗದು, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಶುಕ್ರವಾರ ಬೀರು ತೆಗೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಭದ್ರಾವತಿ ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಶಾಲೆ ಬಸ್ ಪಲ್ಟಿ, ಮಕ್ಕಳಿಗೆ ಗಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment