ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 FEBRUARY 2024
BHADRAVATHI : ಚಲಿಸುತ್ತಿದ್ದ ಗೂಡ್ಸ್ ವಾಹನದಿಂದ ಹಸುವೊಂದು ಕೆಳಗೆ ಹಾರಿ ಪರಾರಿಯಾಗಿದೆ. ವಾಹನದಲ್ಲಿ ಇನ್ನಷ್ಟು ಗೋವುಗಳಿದ್ದು, ಹತ್ಯೆ ಮಾಡುವ ಉದ್ದೇಶದಿಂದ ಕೊಂಡೊಯ್ದಿರುವ ಶಂಕೆ ವ್ಯಕ್ತಪಡಿಸಿ ದೂರು ನೀಡಲಾಗಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭದ್ರಾವತಿಯ ತರೀಕೆರೆ ರಸ್ತೆಯ ಗಾಂಧಿ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಗೂಡ್ಸ್ ವಾಹನದಿಂದ ಹಸು ಕೆಳಗೆ ಹಾರಿದೆ. ವಾಹನದಲ್ಲಿ ಏಳೆಂಟು ಗೂವುಗಳಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಾಧವಾಚಾರ ಸರ್ಕಲ್ ಮೂಲಕ ಗೂಡ್ಸ್ ವಾಹನ ತೆರಳಿದೆ. ಈ ಮಾರ್ಗದಲ್ಲಿರುವ ಸಿಸಿಟಿವಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಗುತ್ತಿಗೆದಾರ ದೇವರಾಜ್ ಎಂಬುವವರು ದುರು ನೀಡಿದ್ದಾರೆ. ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






