ಭದ್ರಾವತಿಯಲ್ಲಿ ಸರಣಿ ಅಪಘಾತ, ಸಂಪೂರ್ಣ ನುಜ್ಜುಗುಜ್ಜಾಯಿತು ಆಟೋ, ಘಟನೆಗೇನು ಕಾರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 FEBRUARY 2024

BHADRAVATHI : ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಬಳಿ ಕಳೆದ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಕಾರೊಂದು ಆಟೋ, ಬಸ್‌ಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಂದು ಆಟೋ ಸಂಪೂರ್ಣ ಜಖಂ ಆಗಿದೆ.

ವೇಗವಾಗಿ ಬಂದ ಕಾರು ಎರಡು ಆಟೋಗಳು ಮತ್ತು ಖಾಸಗಿ ಬಸ್‌ ಒಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ. ಕಾರು ಚಾಲಕ ಮದ್ಯ ಸೇವಿಸಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದ ರಭಸಕ್ಕೆ ಒಂದು ಆಟೋ ಸಂಪೂರ್ಣ ನುಜ್ಜುಗುಜ್ಜಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ – ಪತ್ನಿ ಜೊತೆ ಊರಿಗೆ ತೆರಳಿದ್ದಾಗ ಪಕ್ಕದ ಮನೆಯಿಂದ ಬಂತು ಫೋನ್‌, ಗಡಿಬಿಡಿಯಲ್ಲಿ ವಾಪಸ್‌, ದಾಖಲಾಯ್ತು ಕೇಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 19, 2024

Leave a Comment