SHIVAMOGGA LIVE NEWS | 19 FEBRUARY 2024
SHIMOGA : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಶಿಕ್ಷಕರ ಸಂಘದ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ತಮ್ಮ ಮನವಿ ಆಲಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಳಗ್ಗೆ ಕಪ್ಪು ಪಟ್ಟಿ, ನಂತರ ಧರಣಿ
ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯದ 105 ವಸತಿ ಶಾಲೆಗಳಲ್ಲಿ 750 ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳ ತರಗತಿಗೆ ತೊಂದರೆ ಆಗದಂತೆ ಶಿಕ್ಷಕರು ಬೆಳಗ್ಗೆ ಕಪ್ಪು ಪಟ್ಟಿ ಧರಿಸಿ ಶೈಕ್ಷಣಿಕ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದಾರೆ. ತರಗತಿ ಅವಧಿಯ ಬಳಿಕ ಶಾಲೆಗಳ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಮೇಲಿನ ಹನಸವಾಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿಕ್ಷಕರ ಡಿಮಾಂಡ್ಗಳೇನು?
ಏಳು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಶಿಕ್ಷಕರ ಜೇಷ್ಠತಾ ಪಟ್ಟಿಯಲ್ಲಿ ವ್ಯತ್ಯಾಸವಾಗಿದೆ. ಕೂಡಲೆ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಣೆಗೊಂಡು ಶಿಕ್ಷಕರ ಮುಂಬಡ್ತಿಗೆ ಅವಕಾಶ ಕೊಡಬೇಕು. ಸ್ನಾತಕೋತ್ತರ ಪದವೀಧರ ಶಿಕ್ಷಕರ ವೇತನ ತಾರತಮ್ಯ ನಿವಾರಿಸಬೇಕು. ಆರ್ಟ್ ಅಂಡ್ ಕ್ರಾಫ್ಟ್ ಶಿಕ್ಷಕರ ವೇತನ ತಾರತಮ್ಯ ನಿವಾರಿಸಬೇಕು. ವಿವಿಧ ವಿಭಾಗಕ್ಕೆ ಉಪನ್ಯಾಸಕ ಹುದ್ದೆ ಸೃಜಿಸಿ, ಮುಂಬಡ್ತಿಗೆ ಅವಕಾಶ ನೀಡಬೇಕು. ವೇತನ ಭತ್ಯೆ ತರಾತಮ್ಯ ನಿವಾರಿಸಬೇಕು. ನೌಕರರ ಕಲ್ಯಾಣ ನಿಧಿ ಸ್ಥಾಪಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದ್ದಾರೆ.
ಸ್ಪಂದಿಸದ ಸರ್ಕಾರ, ಶಿಕ್ಷಕರ ಬೇಸರ
ಫೆ.14ರಿಂದ ಶಿಕ್ಷಕರು ಪ್ರತಿಭಟನೆ ಆರಂಭಿಸಿದ್ದಾರೆ. ಎಲ್ಲ ವಸತಿ ಶಾಲೆಗಳ ಮುಂಭಾಗ ನಿರಂತರವಾಗಿ ಧರಣಿ ನಡೆಸಲಾಗುತ್ತಿದೆ. ಆದರೂ ಸರ್ಕಾರ ಶಿಕ್ಷಕರ ಬೇಡಿಕೆಗಳಿಗೆ ಸ್ಪಂದಿಸದಿರುವುಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಒಬ್ಬರಿಗೆ ಕೆಎಫ್ಡಿ ಪಾಸಿಟಿವ್