ಚಂದ್ರಗುತ್ತಿ ದೇಗುಲದ ಜಾತ್ರೆಗೆ ದಿನಾಂಕ ನಿಗದಿ, ಈ ಬಾರಿ ಏನೇನೆಲ್ಲ ವ್ಯವಸ್ಥೆ ಮಾಡಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 FEBRUARY 2024

SORABA : ಸರ್ಕಾರದ ಮಾರ್ಗಸೂಚಿಯಂತೆ ಕಳೆದ ಬಾರಿಯಂತೆ ಈ ವರ್ಷವೂ ತಾಲೂಕಿನ ಇತಿಹಾಸ ಪ್ರಸಿದ್ಧ ಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬೆ ದೇವಿಯ ಜಾತ್ರಾ ಮಹೋತ್ಸವ ಮಾ.15 ರಿಂದ 20ರವರೆಗೆ ನಡೆಯಲಿದೆ ಎಂದು ಸಾಗರ ಉಪ ವಿಭಾಗಾಧಿಕಾರಿ ಆರ್.ಯತೀಶ್ ಹೇಳಿದರು.

ತಾಲೂಕಿನ ಚಂದ್ರಗುತ್ತಿ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಿ ಮಹಾರಥೋತ್ಸವ ಮಾ.18ರಂದು ಜರುಗಲಿದೆ. ಸಣ್ಣ ತೇರು 17ರಂದು ನಡೆಯಲಿದೆ ಎಂದರು.

ಶೌಚಗೃಹ, ಸ್ನಾನಗೃಹ, ಕಾಂಪೌಂಡ್ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಕ್ಷೇತ್ರಕ್ಕೆ 52 ಲಕ್ಷ ರೂ. ಅನುದಾನ ಬಿಡುಗಡೆ ಆಗಿದೆ. ಜಾತ್ರೆಗೆ ಬರುವ ಭಕ್ತರಿಗೆ ಸುಲಭ ಹಾಗೂ ಸುಗಮ ಸಂಚಾರ, ಶೌಚಗೃಹ, ಕುಡಿಯುವ ನೀರು, ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಹುಣ್ಣಿಮೆ ಹಾಗೂ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ದೇವಿಗೆ ಸೇವೆ ಸಲ್ಲಿಸುವ, ವಾದ್ಯ ಬಾರಿಸುವ, ತೇರು ಕಟ್ಟುವ, ಪಲ್ಲಕ್ಕಿ ಹೊರುವ ಕಾರ್ಮಿಕರಿಗೆ ಹಿಂದಿನಿಂದಲೂ ಕನಿಷ್ಠ ಗೌರವ ಧನ ನೀಡಲಾಗುತ್ತಿದ್ದು ಇನ್ನಾದರೂ ಹೆಚ್ಚಳ ಮಾಡುವಂತೆ ಸಭೆಯಲ್ಲಿ ಒತ್ತಾಯಿಸಲಾಯಿತು. ಅಂಗಡಿಗಳಲ್ಲಿ ರಾಸಾಯನಿಕ ಕುಂಕುಮ ಮಾರಾಟ ಮಾಡದಂತೆ ಸೂಚನೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ತಹಸೀಲ್ದಾರ್ ಹುಸೇನ್ ಸರಕಾವಸ್, ಇಒ ಪ್ರದೀಪಕುಮಾ‌ರ್, ದೇವಸ್ಥಾನದ ಆಡಳಿತಾಧಿಕಾರಿ ಶಿವಪ್ರಸಾದ್, ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ಪಿಎಸ್‌ಐ ನಾಗರಾಜ್, ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ಉಪಾಧ್ಯಕ್ಷ ರೇಣುಕಪ್ರಸಾದ್‌, ಪ್ರಮುಖರಾದ ಲಕ್ಷ್ಮೀ, ರತ್ನಾಕರ್, ರಾಜಶೇಖರ, ಎನ್.ಜಿ.ನಾಗರಾಜ್ ಇತರರಿದ್ದರು.

ಇದನ್ನೂ ಓದಿ – ಪತ್ನಿ ಜೊತೆ ಊರಿಗೆ ತೆರಳಿದ್ದಾಗ ಪಕ್ಕದ ಮನೆಯಿಂದ ಬಂತು ಫೋನ್‌, ಗಡಿಬಿಡಿಯಲ್ಲಿ ವಾಪಸ್‌, ದಾಖಲಾಯ್ತು ಕೇಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 19, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment