SSLC, PUC ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ ಪರೀಕ್ಷೆ, ಯಾವಾಗ ನಡೆಯುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 FEBRUARY 2023

EDUCATION NEWS : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವ ಎಸ್‌.ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ಮಾರ್ಚ್ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್​​ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.

ಎಷ್ಟು ವಿದ್ಯಾರ್ಥಿಗಳು? ಎಷ್ಟು ಪರೀಕ್ಷಾ ಕೇಂದ್ರ?

ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ‌ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ‌ ಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ – BREAKING NEWS – ಭದ್ರಾ ನದಿ, ನಾಲೆ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment