SHIVAMOGGA LIVE NEWS | 20 FEBRUARY 2024
SHIMOGA : ಸಕ್ಕರೆ ಕಾರ್ಖಾನೆ ಜಾಗದಲ್ಲಿ ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಬಾರದು. ಅದರ ಬದಲಾಗಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಕೃಷಿ ಭೂಮಿ ಕೊಡಿಸಬೇಕು ಎಂದು ಜೆಡಿಎಸ್ ಕಾರ್ಯಕಾರಿಣಿ ಸದಸ್ಯ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದರು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ಸಕ್ಕರೆ ಕಾರ್ಖಾನೆ ಜಾಗದಲ್ಲಿ ಹಲವು ರೈತರು ದಶಕಗಳಿಂದ ಕೃಷಿ ಮಾಡುತ್ತಿದ್ದಾರೆ. ಅವರನ್ನು ಒಕ್ಕಲೆಬ್ಬಿಸುವ ಕೆಲಸವಾಗುತ್ತಿದೆ. ಈ ಮಧ್ಯೆ ಕೃಷಿ ಭೂಮಿ ಉಳಿಸಿಕೊಡುವುದಾಗಿ ರೈತರಿಂದ 5 ರಿಂದ 7 ಲಕ್ಷ ರೂ.ವರೆಗೆ ಹಣ ಪಡೆಯಲಾಗುತ್ತಿದೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಜಮೀನು ಉಳಿಸಿಕೊಳ್ಳಲು ರೈತರು ಸಾಲ ಮಾಡಿ ಹಣ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಧ್ಯೆ ಪ್ರವೇಶ ಮಾಡಿ, ರೈತರ ಕೃಷಿ ಭೂಮಿ ಉಳಿಸಿಕೊಡಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ನಗರ ಅಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ಮಂಜುನಾಥ್, ವಾಜಿದ್, ವೆಂಕಟೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ‘ಜ್ಞಾನ ದೇಗುಲ’ ಘೋಷಣೆ ಬದಲು, ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಆಕ್ರೋಶ