ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 FEBRUARY 2024
BANGALORE : ಮಂಗನ ಕಾಯಿಲೆ ರೋಗ ಲಕ್ಷಣ ಕಂಡುಬಂದ ತಕ್ಷಣ ಟೆಸ್ಟಿಂಗ್ ನಡೆಸಬೇಕು. ಕೆಎಫ್‌ಡಿ ಪಾಸಿಟಿವ್ ಬಂದವರನ್ನ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು. ಮಂಗನ ಕಾಯಿಲೆಯಿಂದ ಈಗ ಎರಡು ಸಾವು ಸಂಭವಿಸಿದೆ. ಸಾವಿನ ಪ್ರಮಾಣ ಕಡಿಮೆ ಮಾಡುವ ಜವಬ್ದಾರಿಯನ್ನು ಆಯಾ ಜಿಲ್ಲೆಗಳ ಡಿಎಚ್‌ಓಗಳಿಗೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸಭೆ ನಡೆಸಿದರು.
ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಸಚಿವರು, ಕಾಯಿಲೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳ ಕುರಿತು ಶಾಸಕರ ಅಭಿಪ್ರಾಯ ಆಲಿಸಿದರು. ಮಂಗನ ಕಾಯಿಲೆಗೆ ಲಸಿಕೆ ಕಂಡುಹಿಡಿಯುವ ನಿಟ್ಟಿನಲ್ಲಿ ಐಸಿಎಂಆರ್ ಜೊತೆ ಮಾತುಕತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಲಸಿಕೆ ಲಭ್ಯವಾಗಲಿದೆ ಎಂದರು.
ಶಿರಸಿ ಮತ್ತು ಸಾಗರದಲ್ಲಿ ಕೆಎಫ್‌ಡಿ ಟೆಸ್ಟಿಂಗ್‌ಗೆ ಪ್ರಯೋಗಾಲಯ ಸ್ಥಾಪನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದರು.
ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ, ಮಂಕಾಳ ಎಸ್. ವೈದ್ಯ, ಶಾಸಕರಾದ ಆರಗ ಜ್ಞಾನೇಂದ್ರ, ಹೆಚ್.ಡಿ.ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – SSLC, PUC ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ ಪರೀಕ್ಷೆ, ಯಾವಾಗ ನಡೆಯುತ್ತೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422