ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 FEBRUARY 2024

SHIMOGA : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರ ಹತ್ಯೆಗೆ ಯತ್ನಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.

ಕೋಟೆ ಗಂಗೂರಿನ ಹಸಿರುಗಿಡಿದ ಮಾರಿಯಮ್ಮ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಗಣೇಶಪ್ಪ (65) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಾಚ್‌ ಮನ್‌ ಕೆಲಸ ಮಾಡುತ್ತಿದ್ದ ಗಣೇಶಪ್ಪ ಅವರು ಭಾನುವಾರ ಸಂಜೆ ಮನೆಯಿಂದ ಹೊರಗೆ ಹೋಗಿದ್ದರು. ಮರುದಿನ ಬೆಳಗಿನ ಜಾವ ಸ್ಥಳೀಯರೊಬ್ಬರು ಗಣೇಶಪ್ಪ ಅವರ ಮನೆಗೆ ಬಂದು ಹಸಿರುಗಿಡದ ಮಾರಿಯಮ್ಮ ದೇಗುಲದ ಬಳಿ ಘಟನೆ ನಡೆದಿರುವ ಕುರಿತು ಮಾಹಿತಿ ನೀಡಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ನಾಲ್ಕು ತಿಂಗಳಾಯ್ತು ಸದಸ್ಯರಿಲ್ಲ, ಕೂಡಲೆ ಚುನಾವಣೆ ನಡೆಸುವಂತೆ ಒತ್ತಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment