ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 FEBRUARY 2024
SAGARA : ತನ್ನ ಪತ್ನಿಯೊಂದಿಗೆ ಮಾತನಾಡಿದ ಎಂದು ಆರೋಪಿಸಿ, ಆಕ್ರೋಶಗೊಂಡ ಪತಿ, ಎದುರು ಮನೆಯ ಯುವಕ ಮತ್ತು ಆತನ ಕಾರಿನ ಮೇಲೆ ದಾಳಿ ಮಾಡಿದ್ದಾನೆ. ಜಗಳ ಬಿಡಿಸಲು ಬಂದ ಯುವಕನ ಸ್ನೇಹಿತನಿಗೂ ಪತಿರಾಯ ಪೆಟ್ಟು ಕೊಟ್ಟಿದ್ದಾನೆ. ಘಟನೆಯಲ್ಲಿ ಕಾರಿನ ಗಾಜು ಪುಡಿಯಾಗಿದೆ. ಯುವಕನ ಬೆರಳು ಕಟ್ ಆಗಿದೆ.
ಏನಿದು ಘಟನೆ? ಹೇಗಾಯ್ತು ದಾಳಿ?
ಸಾಗರ ತಾಲೂಕು ಬೆಳಲಮಕ್ಕಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರವಿ ಹಲ್ಲೆ ನಡೆಸಿದ ಆರೋಪಿ. ರವಿಯ ಪತ್ನಿಯೊಂದಿಗೆ ಯಲಕುಂದ್ಲಿಯ ನವೀನ್ ಮಾತನಾಡಿದ್ದ. ಇದರಿಂದ ಆಕ್ರೋಶಗೊಂಡ ರವಿ, ನವೀನ್ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ದಾಳಿ ಮಾಡಿದ್ದ. ಘಟನೆಯಲ್ಲಿ ಕಾರಿನ ಗಾಜು ಪುಡಿಯಾಗಿತ್ತು. ಶಬ್ದ ಕೇಳಿ ಹೊರ ಬಂದ ನವೀನ್ ಮೇಲೂ ರವಿ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸ್ನೇಹಿತನಿಗು ಪೆಟ್ಟು ಕೊಟ್ಟ ಪತಿರಾಯ
ಇನ್ನು, ಜಗಳ ಬಿಡಿಸಲು ಬಂದ ನವೀನ್ ಸ್ನೇಹಿತ ಧರೇಶ್ ಮೇಲೂ ರವಿ ಹಲ್ಲೆ ನಡೆಸಿದ್ದಾನೆ ಎಂದು ಆಪಾದಿಸಲಾಗಿದೆ. ಮಚ್ಚಿನಿಂದ ದಾಳಿ ವೇಳೆ ನವೀನ್ ಬೆರಳು ತುಂಡಾಗಿದೆ. ಎದೆ ಭಾಗದಲ್ಲೂ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ನವೀನ್ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಧರೇಶ್ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಟೀ ಕುಡಿದು ಹಿಂತಿರುಗುಷ್ಟರಲ್ಲಿ ನಾಪತ್ತೆಯಾಗಿತ್ತು ಬೈಕ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















