ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 FEBRUARY 2024
SHIMOGA : ಉದ್ಘಾಟನೆ ಬೆನ್ನಿಗೆ ವಿದ್ಯಾನಗರ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ. ಹೊಳೆಹೊನ್ನೂರು ರಸ್ತೆಗೆ ತೆರಳುವವರು ಮತ್ತು ಆ ಭಾಗದಿಂದ ಶಿವಮೊಗ್ಗ ಕಡೆಗೆ ಬರುವ ಬಹುತೇಕ ವಾಹನಗಳು ಸೇತುವೆ ಮೇಲೆ ಸಂಚರಿಸಿದವು. ಬಹುತೇಕರು ಹೊಸ ಸೇತುವೆ ಮೇಲೆ ವಾಹನ ಚಲಾಯಿಸಿ ಸಂಭ್ರಮಿಸಿದರು.

ಟೇಪ್ ಕಟ್ ಮಾಡಿದ ಕೇಂದ್ರ ಸಚಿವ
ಶಿವಮೊಗ್ಗಕ್ಕೆ ಆಗಮಿಸಿದ್ದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ವಿದ್ಯಾನಗರ ರೈಲ್ವೆ ಮೇಲ್ಸೇತುವೆಯನ್ನು ಉದ್ಘಾಟಿಸಿದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಇದ್ದರು.
ವಾಹನ ಸಂಚಾರ ಆರಂಭ
ಉದ್ಘಾಟನೆ ಬೆನ್ನಿಗೆ ಮೇಲ್ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗಿದೆ. ವೃತ್ತಾಕಾರದ ಸೇತುವೆಯಾಗಿರುವುದರಿಂದ ಬಹುತೇಕ ವಾಹನ ಸವಾರರು ಕುತೂಹಲಕ್ಕಾಗಿ ಸೇತುವೆ ಮೇಲೆ ವಾಹನ ಚಲಾಯಿಸಿದರು. ಹಲವರು ಸೇತುವೆಯ ಒಂದು ತುದಿಯಿಂದ ಇನ್ನೊಂದು ತುದಿಗೆ ಹೋಗಿ ಯು ಟರ್ನ್ ಮಾಡಿ ಬರುತ್ತಿದ್ದರು. ಇನ್ನು, ಸೇತುವೆ ಮೇಲೆ ವಾಹನಗಳನ್ನು ನಿಲ್ಲಿಸಿ ಸೆಲ್ಫಿ, ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.
ಇದನ್ನೂ ಓದಿ – ವಿದ್ಯಾನಗರದಲ್ಲಿ ರೈಲ್ವೆ ಮೇಲ್ಸೇತುವೆ ಪಕ್ಕದಲ್ಲಿ ಕೆಳ ಸೇತುವೆಗೆ ಒತ್ತಾಯ, ಕಾರಣವೇನು?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















