ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 FEBRUARY 2024
SHIMOGA : ಸಿನಿಮಾ, ಧಾರವಾಹಿಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳಲು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಕಾರ್ಯಕ್ರಮದ ನಿರ್ದೇಶಕರು, ನಿರ್ಮಾಪಕರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಆಯೋಜಕರು ಮೊದಲು ಬಾಲ ಹಾಗೂ ಕಿಶೋರಾ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ನಿಯಮಗಳ ಅನುಸಾರ ಅನುಮತಿ ಪತ್ರ ಪಡೆಯುವುದು ಕಡ್ಡಾಯ.
5 ಗಂಟೆಗಿಂತಲೂ ಹೆಚ್ಚು ನಿಯೋಜಿಸುವಂತಿಲ್ಲ
ಯಾವುದೇ ಮಗುವನ್ನು ಒಂದು ದಿನದಲ್ಲಿ 5 ಗಂಟೆಗಿಂತಲು ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ. ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ. ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಯನ್ವಯ ಮುಚ್ಚಳಿಕೆಯನ್ನು ಆಯೋಜಕರು ನೀಡಬೇಕು.
ಜವಾಬ್ದಾರಿ ವ್ಯಕ್ತಿ ನಿಯೋಜಿಸಬೇಕು
ಮಕ್ಕಳನ್ನು 27ಕ್ಕಿಂತಲು ಹೆಚ್ಚು ದಿನ ನಟನಾ ಕೆಲಸದಲ್ಲಿ ತೊಡಗಿಸಿಕೊಳ್ಳುವಂತಿಲ್ಲ. ಮಗುವಿನ ರಕ್ಷಣೆಗೆ ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿ ನೇಮಿಸಬೇಕು. ಕಾರ್ಯಕ್ರಮದಿಂದ ಬರುವ ಆದಾಯದಲ್ಲಿ ಕನಿಷ್ಠ ಶೇ.20ರಷ್ಟು ಮಗುವಿನ ಹೆಸರಿಗೆ ನಿಶ್ಚಿತ ಠೇವಣಿ ಇಡಬೇಕು. ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ಮಕ್ಕಳನ್ನು ಬಳಸಿಕೊಂಡು ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರವಾಹಿ ಆಯೋಜಕರು, ನಿರ್ಮಾಪಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಮಲೆನಾಡ ಸೊಗಡಿನ ‘ಕೆರೆಬೇಟೆ’ ಸಿನಿಮಾದ ಟ್ರೇಲರ್ ರಿಲೀಸ್, ತೀರ್ಥಹಳ್ಳಿಯ ಗೌರಿಶಂಕರ್ ಹೀರೋ, ಇಲ್ಲಿದೆ ಟ್ರೇಲರ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






