ರೈತರಿಗೆ ಸರ್ಕಾರದಿಂದ ತರಕಾರಿ ಬೀಜಗಳ ಕಿಟ್‌, ಯಾರೆಲ್ಲ ಪಡೆಯಬಹುದು? ಏನೆಲ್ಲ ದಾಖಲೆ ಕೊಡಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 FEBRUARY 2024

SHIMOGA : ಶಿಕಾರಿಪುರ ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಫಲಾನುಭವಿಗಳಿಗೆ 2 ಸಾವಿರ ರೂ. ಮೊತ್ತದ ತರಕಾರಿ ಬೀಜಗಳ ಕಿಟ್‌ ವಿತರಣೆ ಮಾಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಗೆ ಲಾಭ ಪಡೆಯಬಹುದಾಗಿದೆ.

ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಫೆ.26 ರಿಂದ ತರಕಾರಿ ಬೀಜಗಳ ಕಿಟ್‍ಗಳನ್ನು ತೋಟಗಾರಿಕೆ ಇಲಾಖೆ, ಶಿಕಾರಿಪುರ ಕಚೇರಿಯಿಂದ ಪಡೆಯಬಹುದು.

ಹೆಚ್ಚಿನ ವಿವರಗಳಿಗೆ ಮೊಬೈಲ್‌ ಸಂಖ್ಯೆ ಕಸಬಾ 8971370547, ಅಂಜನಾಪುರ 8151810552, ಹೊಸೂರು 6363095898, ಉಡುಗಣಿ 9108548454, ತಾಳಗುಂದ 6361767251 ನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ – ಮಲೆನಾಡ ಸೊಗಡಿನ ‘ಕೆರೆಬೇಟೆ’ ಸಿನಿಮಾದ ಟ್ರೇಲರ್‌ ರಿಲೀಸ್‌, ತೀರ್ಥಹಳ್ಳಿಯ ಗೌರಿಶಂಕರ್‌ ಹೀರೋ, ಇಲ್ಲಿದೆ ಟ್ರೇಲರ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment