ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 FEBRUARY 2024
SHIMOGA : ಕೆಟ್ಟು ನಿಂತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದಾಗಿ ತೊಂದರೆಗೊಳಗಾಗಿದ್ದ ಪ್ರಯಾಣಿಕರಿಗೆ ಸಂಸದ ಬಿ.ವೈ.ರಾಘವೇಂದ್ರ ನೆರವು ನೀಡಿದ್ದಾರೆ. ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರಿನಿಂದ ಕುಮಟಾಗೆ ತೆರಳುತ್ತಿದ್ದ ಶಿರಸಿ ಉಪ ವಿಭಾಗಕ್ಕೆ ಸೇರಿದ ಸರ್ಕಾರಿ ಬಸ್, ಶಿವಮೊಗ್ಗದ ತ್ಯಾವರೆಕೊಪ್ಪ ಸಮೀಪ ಕೆಟ್ಟು ರಸ್ತೆ ಬದಿಯಲ್ಲಿ ನಿಂತಿತ್ತು. ಇದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು.
ಇದೇ ವೇಳೆ ಶಿವಮೊಗ್ಗದಿಂದ ಸಾಗರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು, ಸರ್ಕಾರಿ ಬಸ್ ನಿಂತಿದ್ದನ್ನು ಗಮನಿಸಿ ಕಾರಿನಿಂದ ಇಳಿದು ಬಸ್ ಚಾಲಕ, ನಿರ್ವಾಹಕರ ಬಳಿ ಕಾರಣ ಕೇಳಿದರು.
ಇದನ್ನೂ ಓದಿ – ಹೊಳೆ ಬಸ್ ನಿಲ್ದಾಣದ ಬಳಿ ರೈತನ ಮೇಲೆ ಬ್ಲೇಡ್ನಿಂದ ದಾಳಿ
ಬಸ್ ಕೆಟ್ಟಿರುವ ಮಾಹಿತಿ ತಿಳಿ ದ ಸಂಸದರು, ಕೆ.ಎಸ್.ಆರ್.ಟಿ.ಸಿ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ವಿಜಯ್ ಕುಮಾರ್ ಅವರನ್ನು ಸಂಪರ್ಕಿಸಿ, ಕೂಡಲೆ ಬಸ್ ದುರಸ್ತಿಗೆ ಕ್ರಮಕೈಗೊಂಡು ಪ್ರಯಾಣಿಕರಿಗೆ ನೆರವಾಗುವಂತೆ ಸೂಚಿಸಿದರು. ಅದರಂತೆ ಕೆ.ಎಸ್.ಆರ್.ಟಿ.ಸಿ ಡಿಸಿ ವಿಜಯ್ ಕುಮಾರ್ ಸಿಬ್ಬಂದಿಗಳನ್ನು ಸ್ಥಳಕ್ಕೆ ಕಳುಹಿಸಿ ಬಸ್ ದುರಸ್ತಿಗೊಳಿಸುವಲ್ಲಿ ಸಹಕರಿಸಿದರು. ತದನಂತರ ಬಸ್ ಕುಮಟಾದತ್ತ ಪ್ರಯಾಣ ಬೆಳೆಸಿತು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






