ಶಿವಮೊಗ್ಗ ಸಿಟಿಯ ಹಲವು ಕಡೆ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 FEBRUARY 2024

SHIMOGA : ಎಂ.ಆರ್.ಎಸ್. 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಫೆ. 28 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ಪೂರೈಕೆ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್.ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿಕ್ಲಬ್ ರಸ್ತೆ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಇನ್ನು, ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂ.ಕೆ.ಕೆ. ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಫೆ. 28 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ.ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪಕೇರಿ, ತಿರುಪಳಯ್ಯನಕೇರಿ, ಸಾವರ್ಕರ್ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 1 ವರ್ಷ, ಈತನಕ ಓಡಾಡಿದ ಪ್ರಯಾಣಿಕರೆಷ್ಟು? ಇಲ್ಲಿದೆ ವರ್ಷದ 10 ಪ್ರಮುಖಾಂಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment