ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 FEBRUARY 2024
SHIMOGA : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ತಿಂಗಳು ಯುವನಿಧಿ ಪಡೆಯಬೇಕಿದ್ದರೆ ತಾನು ನಿರುದ್ಯೋಗಿ ಎಂದು, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಫೆ.29 ರವರೆಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ಘೋಷಣ ಪಮಾಣ ಪತ್ರ ಸಲ್ಲಿಸಬೇಕಿದೆ. ಪ್ರತಿ ತಿಂಗಳು ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡುವುದಿಲ್ಲ.
ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದೆ. ಮುಂದಿನ ತಿಂಗಳು ಈ ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕು. ಎಸ್.ಎಂ.ಎಸ್ ಮೂಲಕ ಅಭ್ಯರ್ಥಿಗಳಿಗೆ ಸಂದೇಶ ರವಾನಿಸಲಾಗುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೋದಿರಬೇಕು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು http;//sevasindhugs.karnataka.gov.in ವೆಬ್ ಸೆಟ್ ಮೂಲಕ ವೀಕ್ಷಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 1 ವರ್ಷ, ಈತನಕ ಓಡಾಡಿದ ಪ್ರಯಾಣಿಕರೆಷ್ಟು? ಇಲ್ಲಿದೆ ವರ್ಷದ 10 ಪ್ರಮುಖಾಂಶ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422