ನಟ ದರ್ಶನ್‌ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರಿಂದ ದೂರು

SHIVAMOGGA LIVE NEWS | 27 FEBRUARY 2024 (ಈ ಸುದ್ದಿಯನ್ನು ಇನ್ನು 40 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಮಹಿಳೆಯರಿಗೆ ಅಗೌರವ ತೋರುವಂತೆ ಮಾತನಾಡಿದ ನಟ ದರ್ಶನ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಸೂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಆರ್.‌ ಮೋಹನ್‌ ಅವರ ನೇತೃತ್ವದಲ್ಲಿ ಮಹಿಳೆಯರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದರು.

ಈಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟ ದರ್ಶನ್‌, ಮಹಿಳೆಯರ ಕುರಿತು ಅವಹೇಳನ ಮಾಡಿದ್ದಾರೆ. ಸಿನಿಮಾಗಳಲ್ಲಿ ಹೆಣ್ಣನ್ನು ಗೌರವಿಸುವಂತೆ ಮಾತನಾಡುತ್ತಾರೆ. ಆದರೆ ಸಾರ್ವಜನಿಕ ಕಾರ್ಯಕ್ರಮ ಮತ್ತು ಮಾಧ್ಯಮಗಳ ಸಂದರ್ಶನದ ವೇಳೆ ಅಶ್ಲೀಲ ಅರ್ಥ ಬರುವಂತೆ ಮಾತನಾಡುತ್ತಿದ್ದಾರೆ. ಯುವ ಜನರಿಗೆ ಮಾದರಿಯಾಗಬೇಕಿದ್ದ ನಟ ಮಹಿಳೆಯರ ಕುರಿತು ಕೀಳಾಗಿ ಮಾತನಾಡಿರುವುದು ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಶೃತಿ, ಆಶಾ, ಯಶೋದಮ್ಮ, ನೇತ್ರಾ, ಸುನಿತಾ, ಸೌಮ್ಯಾ, ಮಾಲಾ ಬಾಯಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಯುವನಿಧಿ ಯೋಜನೆ, ಫಲಾನುಭವಿಗಳಿಗೆ ಮಹತ್ವದ ಸೂಚನೆ, ಇದೊಂದು ಅಪ್‌ಡೇಟ್‌ ಮಾಡಿದ್ದರೆ ಹಣ ಬರಲ್ಲ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Women-files-complaint-against-Actor-Darshan

Leave a Comment