ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 FEBRUARY 2024
SHIMOGA : ಗೋಪಾಲಗೌಡ ಬಡಾವಣೆಯಲ್ಲಿ ಬೆಳಗ್ಗೆ ಕಾಣಿಸಿಕೊಂಡಿದ್ದ ಕರಡಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಇಲ್ಲಿನ ಡಿವಿಜಿ ಪಾರ್ಕ್ ಮುಂಭಾಗದ ಖಾಲಿ ನಿವೇಶನದಲ್ಲಿ ಕರಡಿ ಇತ್ತು.
ನಾಯಿಗಳು ಓಡಿಸಿಕೊಂಡು ಬಂದಿದ್ದರಿಂದ ಕರಡಿ ಆತಂಕಗೊಂಡಿತ್ತು. ನಾಯಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ತುಕಾರಾಂ ಶೆಟ್ಟಿ ಎಂಬುವವರ ಮೇಲೆ ದಾಳಿ ನಡಸಿತ್ತು. ಡಿವಿಜಿ ಪಾರ್ಕ್ ಎದುರು ನಿವೇಶನದಲ್ಲಿ ಗಿಡಗಳ ಮಧ್ಯೆ ಅವಿತು ಕುಳಿತಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ‘ಆಪರೇಷನ್ ಕರಡಿ’ ಆರಂಭಿಸಿದ್ದರು. ಅರೆವಳಿಕೆ ಮದ್ದು ನೀಡಿ, ಬಲೆ ಹಾಕಿ ಕರಡಿಯನ್ನು ಸೆರೆ ಹಿಡಿಯಲಾಗಿದೆ.
ಎರಡೇ ಗಂಟೆಯಲ್ಲಿ ಕಾರ್ಯಚಾರಣೆ ಕಂಪ್ಲೀಟ್
ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಕರಡಿ ಇರುವ ಜಾಗದ ಸಮೀಪಕ್ಕೆ ಜನರಾರು ತೆರಳದಂತೆ ನಿರ್ಬಂಧ ವಿಧಿಸಿದರು. ನಿವೇಶನದ ಸುತ್ತಲು ಬಲೆ ಹಾಕಿ, ಕರಡಿ ತಪ್ಪಿಸಿಕೊಳ್ಳದಂತೆ ನೋಡಿಕೊಂಡರು. ಬಳಿಕ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕರಡಿಯನ್ನು ಸೆರೆ ಹಿಡಿದಿದ್ದಾರೆ. ಆಪರೇಷನ್ ಕರಡಿ ಕಾರ್ಯಾಚರಣೆ ವೀಕ್ಷಿಸಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಕರಡಿ ಸೆರೆ ಹಿಡಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಪರವಾಗಿ ಜನರು ಜೈಕಾರದ ಘೋಷಣೆ ಕೂಗಿದರು.
ಮಾಹಿತಿ & ಫೋಟೊ : ರಾಘವೇಂದ್ರ

ಇದನ್ನೂ ಓದಿ – ಶಿವಮೊಗ್ಗದ ಸಿರಿಗೆರೆಯ ಕೊಟ್ಟಿಗೆಯಲ್ಲಿ 12 ಅಡಿಯ ಕಾಳಿಂಗ ಸರ್ಪ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















