ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 FEBRUARY 2024
SHIMOGA : ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದವನನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಫೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ನಾಸಿರ್ ಹುಸೇನ್ ಬೆಂಬಲಿಗರು, ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ದೇಶ ವಿರೋಧಿ ಘೋಷಣೆ ಕೂಗಿದವನನ್ನು ಬಂಧಿಸಬೇಕು ಎಂದು ಆಗ್ರಹಿಸಿ ಯುವ ಮೋರ್ಚಾ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಪರೇಷನ್ ಕರಡಿ ಯಶಸ್ವಿ, ಅರಣ್ಯ ಇಲಾಖೆ ಪರ ಜೈಕಾರದ ಘೋಷಣೆ
‘ಕಣ್ಣು ಕಾಣಲ್ವ? ಕಿವಿ ಕೇಳಲ್ವ?’
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ‘ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದವರು ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಅನ್ನುತ್ತಿದ್ದರು. ಈಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಖಂಡಿಸುವ ಪ್ರಯತ್ನವನ್ನೂ ಮಾಡುತ್ತಿಲ್ಲ. ಘೋಷಣೆ ಕೂಗಿದವನ ಮುಖ ಟಿವಿಗಳಲ್ಲಿ ಕಾಣಿಸುತ್ತಿದೆ. ಆದರೆ ಆತನನ್ನು ಬಂಧಿಸುವ ಬದಲು ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪರಿಶೀಲಿಸಿ, ವರದಿ ಬಳಿಕ ಮುಂದಿನ ಕ್ರಮ ಎಂದು ಗೃಹ ಸಚಿವ ಪರಮೇಶ್ವರ್ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಅವರಿಗೆ ಕಣ್ಣು ಕಾಣಿಸದಿಲ್ಲವೆ, ಕಿವಿ ಕೇಳಿಸುವುದಿಲ್ಲವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ
ಪ್ರತಿಭಟನೆ ಬಳಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಬಾಲರಾಜ ಅರಸ್ ರಸ್ತೆಯಲ್ಲಿ ಪೊಲೀಸರ ಬ್ಯಾರಿಕೇಡ್ ದಾಟಿ ಮುನ್ನುಗ್ಗಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಚೇರಿ ಗೇಟ್ ಒಳಗ್ಗೆ ನುಗ್ಗಲು ಯತ್ನಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






