ಶಿವಮೊಗ್ಗ, ಭದ್ರಾವತಿಯಲ್ಲಿ ಕಡಿಮೆ ದರದಲ್ಲಿ 5 ಸಾವಿರಕ್ಕೂ ಹೆಚ್ಚು ಸೈಟ್‌ ಹಂಚಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 MARCH 2024

SHIMOGA : ಬಡವರು ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನ ಹಂಚುವ ಗುರಿ ಹೊಂದಿದ್ದೇನೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೂಡಾ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ, ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಕಳೆದ 14 ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅಧ್ಯಕ್ಷ ಅವಧಿಯಲ್ಲಿ ನಿವೇಶನಗಳನ್ನು ಹಂಚುವ ಉದ್ದೇಶವಿದೆ ಎಂದರು.

ಇಲ್ಲಿದೆ 6 ಪ್ರಮುಖ ಪಾಯಿಂಟ್‌

POINT-1-jpg.webpಪ್ರಾಧಿಕಾರದ ಪರಿಷ್ಕೃತ ಮಹಾಯೋಜನೆ (ಸಿಡಿಪಿ) ಕಾರ್ಯ ಪ್ರಗತಿಯಲ್ಲಿದೆ. ನಗರದ ಊರುಗಡೂರು ಗ್ರಾಮದಲ್ಲಿ ವಸತಿ ಬಡಾವಣೆ ನಿರ್ಮಿಸಲಾಗುತ್ತಿದೆ. ಸಿವಿಲ್ ಕಾಮಗಾರಿ ಪ್ರಗತಿಯಲ್ಲಿದೆ. ಅದು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಲಾಗುವುದು ಹಾಗೂ ಊರುಗಡೂರಿನಲ್ಲಿ ಲಭ್ಯವಿರುವ 4 ಎಕರೆ ಜಾಗದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು

POINT-2-jpg.webpಸೋಮಿನಕೊಪ್ಪದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 1 ಎಕರೆ 9 ಗುಂಟೆ ಪ್ರದೇಶದಲ್ಲಿ ವಸತಿ ಸಮುಚ್ಚಯ (ಜಿ+3) ನಿರ್ಮಾಣ ಮಾಡಲಾಗುವುದು.

POINT-3-jpg.webpಸ್ಥಳೀಯ ಪ್ರದೇಶಾಭಿವೃದ್ಧಿ ವ್ಯಾಪ್ತಿಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ.

suda-president-sundaresh

POINT-4-jpg.webp
ಪ್ರಾಧಿಕಾರದ ಬಡಾವಣೆಗಳಲ್ಲಿ ಲಭ್ಯವಿರುವ ವಾಣಿಜ್ಯ ನಿವೇಶನಗಳನ್ನು ಗುರುತಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಪ್ರಮುಖ ವೃತ್ತಗಳನ್ನು ಹಾಗೂ ಉದ್ಯಾನಗಳನ್ನು ಗುರುತಿಸಿ ಅಭಿವೃದ್ಧಿ ಮಾಡಲಾಗುವುದು.

POINT-5-jpg.webp
ಪ್ರಾಧಿಕಾರದಿಂದ ಈಗಾಗಲೆ ಮೂಲೆ ಮತ್ತು ಮಧ್ಯಂತರ ನಿವೇಶನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ – ಕಿಟಕಿ ಕೊರೆದು ವೀಕ್ಷಣಾಲಯದಿಂದ ಪರಾರಿಯಾಗಿದ್ದ ಮೂವರು ಪೊಲೀಸ್‌ ವಶಕ್ಕೆ, ಎಲ್ಲೆಲ್ಲಿ ಸಿಕ್ಕರು?

POINT-6-jpg.webp
ಪ್ರಾಧಿಕಾರದ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ, ಉದ್ಯಾನ ಅಭಿವೃದ್ಧಿ ಇತ್ಯಾದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 25 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಸೂಡಾ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ, ಎಂಜಿನಿಯರ್ ಬಸವರಾಜಪ್ಪ ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment