ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 MARCH 2024
SHIMOGA : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ಅಂಗವಾಗಿ ಗಾಂಧಿ ಬಜಾರ್ನಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ತಾಯಿಯ ತವರು ಮನೆ ಗಾಂಧಿ ಬಜಾರ್ನಲ್ಲಿದೆ. ಅಲ್ಲಿ ದೇವಸ್ಥಾನ ಸಮಿತಿ, ಭಕ್ತರ ಸಮ್ಮುಖದಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು.
ಈ ಬಾರಿ ಮಾರಿಕಾಂಬೆ ದೇವಿ ಜಾತ್ರೆಯು ಮಾರ್ಚ್ 12 ರಿಂದ 16ರವರೆಗೆ ನಡೆಯಲಿದೆ. ಮಾ.12ರಂದು ತವರು ಮನೆ ಗಾಂಧಿ ಬಜಾರ್ ಕಾಳಿಕಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಮರು ದಿನ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿರುವ ಗದ್ದುಗೆ ಮೇಲೆ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಮಾರ್ಚ್ 16ರಂದು ರಾಜಬೀದಿ ಉತ್ಸವದ ಮೂಲಕ ದೇವಿಯನ್ನು ಕಾಡಿಗೆ ಬಿಟ್ಟು ಬರಲಾಗುತ್ತದೆ.
ಚಪ್ಪರ ಶಾಸ್ತ್ರದ ಸಂದರ್ಭ ದೇವಸ್ಥಾನ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್, ಪೂಜಾ ಕನ್ವಿನರ್ ಸತ್ಯನಾರಾಯಣ, ಕಾರ್ಯದರ್ಶಿ ಲೋಕೇಶ್, ಸಹ ಕಾರ್ಯದರ್ಶಿ ಸುನೀಲ್, ಡಿ.ಎಸ್.ಚಂದ್ರಶೇಖರ್, ಪ್ರಭಾಕರ ಗೌಡ, ವಿಶ್ವಕರ್ಮ ಸಮಾಜದ ಪದಾಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ – ಲೋಕಸಭೆ ಚುನಾವಣೆಗೆ ಗೀತಾ, ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಹೇಳಿದ್ದೇನು? ಇಲ್ಲಿದೆ 3 ಪ್ರಮುಖ ಪಾಯಿಂಟ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






