ಗ್ರಾಮಗಳಿಗೆ ನಿರಂತರ ತ್ರೀ ಫೇಸ್‌ ವಿದ್ಯುತ್‌ಗೆ ಆಗ್ರಹ, ಟಿಸಿಗಳ ಬದಲಾವಣೆಗೆ ಪಟ್ಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 MARCH 2024

SHIMOGA : ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಸತತ 7 ಗಂಟೆ ತ್ರೀಫೇಸ್ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸ್ವಯಂ ಆರ್ಥಿಕ ಯೋಜನೆ ಕೈಬಿಡಬೇಕು. ಸುಟ್ಟು ಹೋಗಿರುವ, ಕೆಟ್ಟು ಹೋಗಿರುವ ಟಿಸಿಗಳನ್ನು ತಕ್ಷಣವೇ ಬದಲಾಯಿಸಬೇಕು. ರೈತರಿಗೆ ನಿರಂತರ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿದರು. ಮನವಿಗೆ ಸ್ಪಂದಿಸಿದ ಶಿವಮೊಗ್ಗ ಕೆಇಬಿ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಆರ್.ವೀರೇಂದ್ರ, ಸಮಸ್ಯೆಗಳನ್ನು ಆದ್ಯತೆ ಮೇಲೆ ಬಗೆಹರಿಸುವುದಾಗಿ ತಿಳಿಸಿದರು.

ಇದನ್ನೂ ಓದಿ – ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿ

ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಪ್ರಮುಖರಾದ ಕೆ.ರಾಘವೇಂದ್ರ, ಗುರುಶಾಂತ, ಸಿ.ಚಂದ್ರಪ್ಪ, ಶಿವಮೂರ್ತಿ ಇತರರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment