ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 MARCH 2024

SHIMOGA : ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮಿತ್ತ ಜಾತ್ರೆ ನಡೆಯಲಿದೆ. ಈ ಹಿನ್ನೆಲೆ ಮಾ.8ರ ಬೆಳಗ್ಗೆ 4 ಗಂಟೆಯಿಂದ ಮಾ.9ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕು ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಯಾವ್ಯಾವ ಮಾರ್ಗ ಬದಲಾವಣೆ?

ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ತೆರಳಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್.ಹೆಚ್.ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಎನ್.ಹೆಚ್. ಆಸ್ಪತ್ರೆ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರಬೇಕು.

ಇದನ್ನೂ ಓದಿ – ಕೋಟೆ ಮಾರಿಕಾಂಬ ಜಾತ್ರೆ, ‘ಸಾರು ಹಾಕುವ ಪದ್ಧತಿ’ಗೆ ಚಾಲನೆ, ವಿದೇಶಿಗರನ್ನು ಸೆಳೆದ ಆಚರಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment