ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 MARCH 2024
SHIMOGA : ಬಾರ್ ಅಂಡ್ ರೆಸ್ಟೋರೆಂಟ್ನ ಗೋಡೆಗೆ ಕನ್ನ ಕೊರೆದು ಕ್ಯಾಶ್ ಬಾಕ್ಸ್ನಲ್ಲಿದ್ದ ನಗದು ಮತ್ತು ವಿವಿಧ ಬ್ರ್ಯಾಂಡ್ನ ಮದ್ಯ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ಕ್ಯಾಶಿಯರ್ ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಅಬ್ಬಲಗೆರೆಯಲ್ಲಿರುವ ದುರ್ಗ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಘಟನೆ ಸಂಭವಿಸಿದೆ. ಮಾ.4ರಂದು ರಾತ್ರಿ 11 ಗಂಟೆಗೆ ವ್ಯವಹಾರ ಮುಗಿಸಿ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲಾಗಿತ್ತು. ಮರುದಿನ ಬೆಳಗ್ಗೆ ಬಂದ ಕನ್ನ ಕೊರೆದಿರುವುದು ಗಮನಕ್ಕೆ ಬಂದಿತ್ತು.
ಇದನ್ನೂ ಓದಿ – ಶಿವಮೊಗ್ಗ ಟೋಲ್, ದಾಖಲೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ, ಏನದು ದಾಖಲೆ?
ಪರಿಶೀಲನೆ ನಡೆಸಿದಾಗ ಕ್ಯಾಶ್ ಬಾಕ್ಸ್ನಲ್ಲಿದ್ದ 75 ಸಾವಿರ ರೂ. ನಗದು, 74,300 ರೂ. ಮೌಲ್ಯದ ವಿವಿಧ ಮದ್ಯ ಕಳ್ಳತನವಾಗಿರುವುದು ಗೊತ್ತಾಗಿದೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು





