ಶಿವಮೊಗ್ಗದ ಹರಕೆರೆ ರಾಮೇಶ್ವರ ದೇವಸ್ಥಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಕುತೂಹಲಕಾರಿ ಪಾಯಿಂಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 MARCH 2024

SHIMOGA : ಶಿವರಾತ್ರಿಯಂದು ಹರಕೆರೆಯ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬಂದು ಪೂಜೆ ಸಲ್ಲಿಸುತ್ತಾರೆ. ಪರಮೇಶ್ವರನನ್ನು ಧ್ಯಾನಿಸಿ, ಪ್ರಾರ್ಥಿಸಿ, ಸಂಕಷ್ಟ ನಿವಾರಣೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ದೇವಾಲಯದ ಆವರಣದಲ್ಲಿರುವ ಬೃಹತ್ ಶಿವನ ಮೂರ್ತಿಗೆ ಕೈ ಮುಗಿದು, ಫೋಟೊ ಕ್ಲಿಕ್ಕಿಸಿಕೊಳ್ಳುತ್ತಾರೆ.

Harakere-Temple-Special-Shivarathri

ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ರಾಮಾಯಣ ಕಾಲದ ಹಿನ್ನೆಲೆ ಇದೆ. ಬೇಲೂರು, ಹಳೆಬೀಡು ದೇಗುಲಗಳ ಜೊತೆಗೆ ನಂಟು ಇದೆ. ಈ ದೇಗುಲ ಶೃಂಗೇರಿ ಮಠದ ನಿರ್ವಹಣೆಯಲ್ಲಿದೆ. ಇಲ್ಲಿರುವ ಲಿಂಗದ ಕುರಿತು ಕುತೂಹಲಕಾರಿ ಸಂಗತಿಯು ಇದೆ.

ರಾಮೇಶ್ವರ ದೇವಸ್ಥಾನದ ಬಗ್ಗೆ 3 ಪ್ರಮುಖ ಸಂಗತಿ

POINT%201ಶ್ರೀರಾಮೇಶ್ವರ ದೇವಸ್ಥಾನಕ್ಕೆ ಪೌರಾಣಿಕ ಹಿನ್ನೆಲೆ ಇದೆ. ರಾಮಾಯಣ ಕಾಲದ ಹಲವು ಘಟನೆಗಳು ಇಲ್ಲಿ ನಡೆದಿವೆ ಎಂಬ ನಂಬಿಕೆ ಇದೆ. ಇಲ್ಲಿ ಸಹಸ್ರ ಲಿಂಗ ಉದ್ಭವವಾಗಿತ್ತು ಎಂದು ಹೇಳಲಾಗುತ್ತದೆ. ಇನ್ನು, ಬೇಲೂರು, ಹಳೆಬೀಡು ದೇಗುಲಗಳು ನಿರ್ಮಿಸಿದ ಕಾಲದಲ್ಲಿಯೆ ತುಂಗಾ ನದಿ ದಂಡೆಯ ಮೇಲೆ ಈ ದೇಗುಲವನ್ನೂ ರಾಜರು ನಿರ್ಮಾಣ ಮಾಡಿದ್ದರು. ದೇಗುಲದ ಒಳಾಂಗಣದ ಕಂಬಗಳು ಇದಕ್ಕೆ ಸಾಕ್ಷಿ. ಆದರೆ ಆಗ ಶಿವನ ಮೂರ್ತಿ ಪ್ರತಿಷ್ಠಾಪನೆ ಮಾಡಿರಲಿಲ್ಲ. ಹಾಗಾಗಿ ಸ್ಥಳೀಯರೆ ಶಿವನ ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಂಡು ಪೂಜೆ ಸಲ್ಲಿಸುತ್ತಿದ್ದರು.

shiva

POINT%202ಇಲ್ಲಿ ಪೂಜೆ ಸಲ್ಲಿಸುತ್ತಿದ್ದ ಬ್ರಾಹ್ಮಣ ಸಮುದಾಯದವರು ನಾನಾ ಕಾರಣಕ್ಕೆ ಊರು ತೊರೆಯುವಂತಾಯಿತು. ಆಗ ದೇವಸ್ಥಾನವನ್ನು ಶೃಂಗೇರಿ ಮಠದ ಸುಪರ್ದಿಗೆ ನೀಡಿದ್ದರು. ಅಲ್ಲಿಂದ ಶೃಂಗೇರಿ ಮಠವೇ ದೇಗುಲದ ನಿರ್ವಹಣೆ ಮಾಡುತ್ತಿದೆ. ಈ ಹಿಂದೆ ದೇಗುಲಕ್ಕೆ ಭೇಟಿ ನೀಡಿದ್ದ ಶೃಂಗೇರಿ ಜಗದ್ಗುರು ಶ್ರೀ ಚಂದ್ರಶೇಖರ ಭಾರತೀ ಸ್ವಾಮೀಜಿ ಅವರು, ರಾಮಯಣ ಕಾಲದ ಹಿನ್ನಲೆ ಇದ್ದಿದ್ದರಿಂದ ಇದಕ್ಕೆ ಶ್ರೀ ರಾಮೇಶ್ವರ ದೇವಸ್ಥಾನ ಎಂದು ನಾಮಕರಣ ಮಾಡಿದರು.

shiva1

POINT%203ಈ ಮೊದಲು ದೇವಸ್ಥಾನದ ಹಿಂದೆ ಮತ್ತು ಮುಂದೆ ಬಾಗಿಲು ಇತ್ತು. ಪೂರ್ವದ ಬಾಗಿಲಿನಿಂದ ದೇವರಿಗೆ ಪೂಜೆಯಾಗುತ್ತಿತ್ತು. ಆದರೆ ದಾರಿಯಲ್ಲಿ ಹೋಗುವ ಜನರಿಗೆ ದೇವಸ್ಥಾನ, ದೇವರು ಕಾಣಿಸುತ್ತಿರಲಿಲ್ಲ. ಹಾಗಾಗಿ ಪೂರ್ವದ ಬಾಗಿಲು ಮುಚ್ಚಿ, ಪಶ್ಚಿಮಾಭಿಮುಖವಾಗಿ ದೇವರ ಪೂಜೆ ಆರಂಭಿಸಲಾಯಿತು. ಆದರೆ ದೇಗುಲದ ಒಳಗಿರುವ ಶಿವಲಿಂಗವನ್ನು ಮಾತ್ರ ತಿರುಗಿಸಲಿಲ್ಲ. ಇದೆ ಕಾರಣಕ್ಕೆ ಶ್ರೀ ರಾಮೇಶ್ವರ ದೇವಸ್ಥಾನದ ಶಿವಲಿಂಗದ ಪಾಣಿ ಪೀಠದ ಬಲ ಭಾಗದಲ್ಲಿ ಸೋಮಸೂತ್ರ (ತೀರ್ಥ ಬೀಳುವ ಜಾಗ) ಇದೆ. ಸಾಮಾನ್ಯವಾಗಿ ಎಲ್ಲಾ ದೇಗುಲದಲ್ಲಿ ಸೋಮಸೂತ್ರ ಎಡ ಭಾಗದಲ್ಲಿ ಇರಲಿದೆ. ಈಶ್ವರ ಸರ್ವತೋಮುಖನಾಗಿದ್ದಾನೆ ಎಂದು ಈ ಮೊದಲು ಲಿಂಗಕ್ಕೆ ಪೂಜೆ ಮಾಡುತ್ತಿದ್ದ ಹಿಂಬದಿಯಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ.

ಪ್ರತಿ ಸೋಮವಾರ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಲಿದೆ. ಶಿವರಾತ್ರಿ ಸಂದರ್ಭ ಲಕ್ಷಾಂತರ ಭಕ್ತರು ಇಲ್ಲಿಗೆ ಬರುತ್ತಾರೆ. ಇಡೀ ದಿನ ದರ್ಶನಕ್ಕೆ ವ್ಯವಸ್ಥೆ ಇರುತ್ತದೆ. ರಾತ್ರಿ ಜಾಗರಣೆ ಪೂಜೆ ಇರಲಿದೆ. ದೇವರಿಗೆ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಲಾಗುತ್ತದೆ.

ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 7, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment