ಕೋಟೆ ಮಾರಿಕಾಂಬ ಜಾತ್ರೆ, ಯಾವ್ಯಾವ ದಿನ ಏನೇನು ಪೂಜೆ, ಕಾರ್ಯಕ್ರಮ ನಡೆಯಲಿದೆ? ಇಲ್ಲಿದೆ ಪಟ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 MARCH 2024

SHIMOGA : ನಗರ ದೇವತೆ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಗೆ ಅಂತಿಮ ಸಿದ್ಧತೆ ನಡೆಯುತ್ತಿದೆ. ಮಾ.12ರಿಂದ ಜಾತ್ರೆ ಆರಂಭವಾಗಲಿದೆ. ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು, ದೇವಿಯನ್ನು ಪೂಜಿಸಿ ಪುನೀತರಾಗುತ್ತಾರೆ. ಈ ಬಾರಿ ಜಾತ್ರೆಯಲ್ಲಿ ಯಾವ್ಯಾವ ದಿನ ಏನೇನು ಕಾರ್ಯಕ್ರಮ ನಡೆಯಲಿದೆ ಅನ್ನುವುದ ವಿವರ ಇಲ್ಲಿದೆ.

ಮಾರ್ಚ್‌ 12ರಂದು ಏನೇನು ನಡೆಯಲಿದೆ?

ಬೆಳಗಿನ ಜಾವ 5 ಗಂಟೆಗೆ ಬಿ.ಬಿ.ರಸ್ತೆಯ ಬ್ರಾಹ್ಮಣ ಸಮಾಜದ ನಾಡಿಗರ ಕುಟುಂಬದವರನ್ನು ಪೂಜೆಗೆ ಆಹ್ವಾನಿಸಲಾಗುತ್ತದೆ. ಆ ಕುಟುಂಬದ ಮುತ್ತೈದೆಯರು ಮಂಗಳ ವಾದ್ಯಗಳೊಂದಿಗೆ ದೇವಿಯ ತವರು ಮನೆ ಗಾಂಧಿ ಬಜಾರ್‌ವರೆಗೆ ಮೆರವಣಿಗೆಯಲ್ಲಿ ಆಗಮಿಸುತ್ತಾರೆ. ದೇವಿಗೆ ಬಾಸಿಂಗ ಅರ್ಪಿಸಿ, ಉಡಿ ತುಂಬಿ, ಪೂಜೆ ಸಲ್ಲಿಸುತ್ತಾರೆ. ವಿಶ್ವಕರ್ಮ ಸಮಾಜದವರು ಸಾರ್ವಜನಿಕವಾಗಿ ಪೂಜೆಯನ್ನು ಆರಂಭಿಸುತ್ತಾರೆ. ಅಂದು ರಾತ್ರಿ 10 ಗಂಟೆಯವರೆಗೂ ಲಕ್ಷಾಂತರ ಮುತ್ತೈದೆಯರು ಶ್ರೀ ಮಾರಿಕಾಂಬೆಗೆ ಮಡಲಕ್ಕಿ ನೀಡಿ, ಉಡಿ ತುಂಬಿ ತಮ್ಮ ಪೂಜೆ ಸಲ್ಲಿಸುತ್ತಾರೆ.

ಬೆಳಿಗ್ಗೆ 5 ಗಂಟೆಯಿಂದ ಎಡೆ ಪೂಜೆ ನಡೆಸಲಾಗುತ್ತದೆ. ರಾತ್ರಿ 9 ಗಂಟೆ ನಂತರ ಮಾರಿಕಾಂಬೆಯನ್ನು ರಥದಲ್ಲಿ ಕೂರಿಸಿ, ಮೆರವಣಿಗೆ ನಡೆಸಲಾಗುತ್ತದೆ. ಉಪ್ಪಾರ ಸಮಾಜದವರು ಗದ್ದುಗೆಗೆ ತಂದು ಪ್ರತಿಷ್ಠಾಪಿಸುತ್ತಾರೆ. ಈ ಮಧ್ಯೆ ಗಂಗಾಪರಮೇಶ್ವರಿ ದೇವಸ್ಥಾನದ ಬಳಿ ಗಂಗಾ ಮತಸ್ಥರು ಗಂಗೆ ಪೂಜೆ ನೆರವೇರಿಸುತ್ತಾರೆ.

ಮಾರ್ಚ್‌ 14ರಿಂದ ಗದ್ದುಗೆಯಲ್ಲಿ ಪೂಜೆ

ಅಂದು ಬೆಳಗಿನ ಜಾವ 4 ಗಂಟೆಗೆ ವಿದ್ಯಾನಗರದ ಕರ್ಲಹಟ್ಟಿಯ ಹರಿಜನ ಸಮಾಜದವರು ಬೇವಿನ ಉಡುಗೆಯೊಂದಿಗೆ ಬಂದು ದೇವಿಗೆ ಪೂಜೆ ಸಲ್ಲಿಸುತ್ತಾರೆ. ಆ ನಂತರ ದೇವಿಯನ್ನು ಗದ್ದುಗೆಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

ಕುರುಬ ಜನಾಂಗದ ಗುತ್ಯಮ್ಮ ದೇವಾಲಯದ ಅರ್ಚಕರಾದ ಚೌಡಿಕೆ ಕುಟುಂಬದವರು ನೈವೇದ್ಯ ಮಾಡಿ ಪೂಜೆ ಸಲ್ಲಿಸುತ್ತಾರೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ವಾಲ್ಮೀಕಿ ಸಮಾಜ, ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಪ್ಪಾರ ಸಮಾಜ, ಮದ್ಯಾಹ್ನ 2 ರಿಂದ ರಾತ್ರಿ 11 ಗಂಟೆ ವರೆಗೆ ಮಡಿವಾಳ ಸಮಾಜದವರು ಸರದಿಯಂತೆ 4 ದಿನಗಳ ಕಾಲ ಗದ್ದುಗೆಯಲ್ಲಿ ಅಮ್ಮನವರಿಗೆ ಪೂಜೆ ಸಲ್ಲಿಸುತ್ತಾರೆ.

ಮಾರ್ಚ್‌ 16ರಂದು ಮಹಾ ಮಂಗಳಾರತಿ

ಶನಿವಾರ ರಾತ್ರಿ 7 ಗಂಟೆಗೆ ಸಮಿತಿ ವತಿಯಿಂದ ದೇವಿಗೆ ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಆ ನಂತರ ಶ್ರೀ ಮಾರಿಕಾಂಬೆಯ ದೊಡ್ಡ ಸಂಖ್ಯೆಯ ಭಕ್ತರೊಂದಿಗೆ ತಾಯಿಯ ವನ ಪ್ರವೇಶಕ್ಕೆ ಮೆರವಣಿಗೆ ನಡೆಸಲಾಗುತ್ತದೆ. ಮಡಿವಾಳ ಸಮಾಜದವರು ತಾಯಿಯನ್ನು ವನಕ್ಕೆ ಕರೆದೊಯ್ದು ಶಾಸ್ತ್ರ, ಪೂಜೆ ಸಲ್ಲಿಸಿ ವನದಿಂದ ಹಿಂತಿರುಗುತ್ತಾರೆ.

ಇದನ್ನೂ ಓದಿ – ಕೋಟೆ ಮಾರಿಕಾಂಬ ಜಾತ್ರೆ, ‘ಸಾರು ಹಾಕುವ ಪದ್ಧತಿ’ಗೆ ಚಾಲನೆ, ವಿದೇಶಿಗರನ್ನು ಸೆಳೆದ ಆಚರಣೆ

ನೆಹರೂ ಕ್ರೀಡಾಂಗಣದಲ್ಲಿ ಕುಸ್ತಿ

ಮಾರ್ಚ್ 15 ರಿಂದ 17 ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ನಡೆಯಲಿದೆ. ರಾಜ್ಯ ಮತ್ತು ಅಂತರರಾಜ್ಯದ ಹೆಸರಾಂತ ಪೈಲ್ವಾನರು ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 11, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment