BREAKING NEWS | ಲೋಕಸಭೆ ಚುನಾವಣೆ ದಿನಾಂಕ ಪ್ರಕಟ, ಕರ್ನಾಟಕದಲ್ಲಿ ಯಾವಾಗ ಮತದಾನ?

SHIVAMOGGA LIVE NEWS | 16 MARCH 2024 ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ELECTION NEWS : ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌, ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಸುವುದಾಗಿ ತಿಳಿಸಿದರು.

ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಎರಡನೇ ಹಂತದ ಚುನಾವಣೆ ಮೇ 7ರಂದು ಮತದಾನ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 

ವಿಧಾನಸಭೆ ಉಪ ಚುನಾವಣೆ

ಕರ್ನಾಟಕ ಸೇರಿ ವಿವಿಧ ರಾಜ್ಯಗಳ 26 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಆಯಾ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ದಿನಾಂಕದಂದೆ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ – ಶಿವಮೊಗ್ಗ ನಗರ ಕೇಸರಿಮಯ, ಮೋದಿ ಸಾಗುವ ರಸ್ತೆಗಳಲ್ಲಷ್ಟೇ ಗುಂಡಿಗಳು ಮಾಯ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment