ಶಸ್ತ್ರಾಸ್ತ್ರಗಳನ್ನು ಪೊಲೀಸ್‌ ಠಾಣೆಗೆ ಒಪ್ಪಿಸುವಂತೆ ಸೂಚನೆ, ಕೆಲವರಿಗೆ ಆದೇಶದಿಂದ ವಿನಾಯಿತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 MARCH 2024

SHIMOGA : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್‌ 16ರಿಂದ ಜೂನ್ 6ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಆದ್ದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ, ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಗಳಿಗೆ ಅವುಗಳನ್ನು ಒಪ್ಪಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದ್ದಾರೆ. 

ಜಿಲ್ಲೆಯ ಯಾವುದೇ ಪ್ರದೇಶಗಳಲ್ಲಿ ಹೊರಗಿನವರು ಅಥವಾ ಸ್ಥಳೀಯರು ಶಸ್ತ್ರ, ಬಂದೂಕು ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ. ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿವಮೊಗ್ಗ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ಹಾಗೂ ಸಾಗರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಬ್ಯಾಂಕುಗಳು ಮತ್ತು ಕೈಗಾರಿಕೆಗಳ ಭದ್ರತೆಗೋಸ್ಕರ ಆಯುಧಗಳನ್ನು ಹೊಂದಿರುವವರಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. 

ಇದನ್ನೂ ಓದಿ – ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಟೋಲ್‌ ಗೇಟ್‌ಗೆ ಬಸ್‌ ಅಡ್ಡ ನಿಲ್ಲಿಸಿ ದಿಢೀರ್‌ ಪ್ರತಿಭಟನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment