ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನದ ಚುನಾವಣೆಗೆ ದಿನಾಂಕ ಪ್ರಕಟ, ಯಾವಾಗ ಮತದಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 MARCH 2024

SHIMOGA : ಲೋಕಸಭೆ ಚುನಾವಣೆ ಕಾವು ಏರುತ್ತಿರುವ ಹೊತ್ತಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್‌) ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮಾ.21ರಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. 13 ನಿರ್ದೇಶಕರ ಆಯ್ಕೆಗೆ ಏ.6ರಂದು ಮತದಾನ ನಡೆಯಲಿದೆ ಎಂದು ಶಿವಮೊಗ್ಗ ಉಪ ವಿಭಾಗಾಧಿಕಾರಿ ಮತ್ತು ಡಿಸಿಸಿ ಬ್ಯಾಂಕ್‌ನ ರಿಟರ್ನಿಂಗ್‌ ಆಫೀಸರ್‌ ಜಿ.ಹೆಚ್‌.ಸತ್ಯನಾರಾಯಣ ತಿಳಿಸಿದ್ದಾರೆ.  

ವಿವಿಧ ಕ್ಷೇತ್ರದಿಂದ 13 ನಿರ್ದೇಶಕರು

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ಒಟ್ಟು 13 ನಿರ್ದೇಶಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಪ್ರತಿ ತಾಲೂಕಿಗೆ ಒಬ್ಬರಂತೆ ವಿವಿಧ ಸಹಕಾರ ಸಂಘಗಳಿಂದ ಚುನಾಯಿಸಲ್ಪಡುವ ಪ್ರತಿನಿಧಿಗಳು, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳು, ಸಂಸ್ಕರಣ ಸಂಘಗಳ ವತಿಯಿಂದ ಇಬ್ಬರು ಸದಸ್ಯರು, ಪಟ್ಟಣ ಸಹಕಾರ ಸಂಘಗಳು ಮತ್ತು ವ್ಯವಸಾಯೇತರ ಸಹಕಾರ ಸಂಘಗಳ ವತಿಯಿಂದ ಇಬ್ಬರು, ಇನ್ನಿತರೆ ಸಹಕಾರ ಸಂಘಗಳ ವತಿಯಿಂದ ಇಬ್ಬರು ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಚುನಾವಣಾ ವೇಳಾ ಪಟ್ಟಿ

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಮಾ.21 ರಿಂದ ಮಾ.29ರವರೆಗೆ ಅವಕಾಶವಿದೆ. ಮಾ.30ರಂದು ನಾಮಪತ್ರ ಪರಿಶೀಲನೆ ನಡೆಸಲಾಗುತ್ತದೆ. ಅದೇ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಮಾ.31ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿಯನ್ನು ಅದೇ ದಿನ ಪ್ರಕಟಿಸಲಾಗುತ್ತದೆ. ಅಲ್ಲದೆ ಅವಶ್ಯವಿದ್ದಲ್ಲಿ ಚುನಾವಣೆ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುತ್ತದೆ.

ಏ.2ರಂದು ಚುನಾವಣೆ ಚಿಹ್ನೆಯೊಂದಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಏ.6ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿ ಕಟ್ಟಡದಲ್ಲಿ ಮತದಾನ ನಡೆಯಲಿದೆ. ಮತದಾನ ಮುಗಿಯುತ್ತಿದ್ದಂತೆ ಎಣಿಕೆ ಕಾರ್ಯ ನಡೆಯಲಿದೆ. ಪೂರ್ಣಗೊಳ್ಳುತ್ತಿದ್ದಂತೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ – ಶಸ್ತ್ರಾಸ್ತ್ರಗಳನ್ನು ಪೊಲೀಸ್‌ ಠಾಣೆಗೆ ಒಪ್ಪಿಸುವಂತೆ ಸೂಚನೆ, ಕೆಲವರಿಗೆ ಆದೇಶದಿಂದ ವಿನಾಯಿತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment