ಶಿವಮೊಗ್ಗದಲ್ಲಿ ಕಾಲೇಜಿನ ಕಿಟಕಿ ಮುರಿದು ಹಣ ಕಳವು | ಪಿ.ಜಿಯಲ್ಲಿ ಯುವತಿ ಆತ್ಮಹತ್ಯೆ | ಕಾಶಿಪುರದಲ್ಲಿ ಪೊಲೀಸ್‌ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MARCH 2024

ಮಾಹಿಳಾ ಪಿ.ಜಿಯಲ್ಲಿ ನೇಣು ಬಿಗಿದು ಯುವತಿ ಸಾವು

SHIMOGA : ಮಹಿಳಾ ಪಿ.ಜಿಯಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಪಿ.ಜಿಯಲ್ಲಿ ಘಟನೆ ಸಂಭವಿಸಿದೆ. ಮಾಲಾ (26) ಮೃತ ಯುವತಿ. ಪಿ.ಜಿಯ ತನ್ನ ಕೊಠಡಿಯಲ್ಲಿ ಬಟ್ಟೆಯಿಂದ ನೇಣು ಬಿಗಿದುಕೊಂಡಿದ್ದಾಳೆ. ಮನು ಕುಮಾರ್‌ ಎಂಬಾತ ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ.

ಕಾಶಿಪುರದಲ್ಲಿ ಪೊಲೀಸ್‌ ದಾಳಿ, ಓರ್ವ ಅರೆಸ್ಟ್

SHIMOGA : ಕಾಶಿಪುರದಲ್ಲಿ ಅಂಗಡಿಯೊಂದರ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಹೇಶ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು, ಆತನ ಬಳಿ ಮೂಟೆಯಲ್ಲಿದ್ದ 42 ಮದ್ಯದ ಪೌಚ್‌ಗಳನ್ನು  ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 1598 ರೂ. ಎಂದು ಅಂದಾಜಿಸಲಾಗಿದೆ. ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಕಾಲೇಜಿನ ಕಿಟಕಿ ಮುರಿದು ಹಣ ಕಳವು

SHIMOGA : ಕಾಲೇಜಿನ ಕಚೇರಿಯ ರೂಮಿನ ಕಿಟಕಿಯ ಸರಳು ಮುರಿದು ಒಳನುಗ್ಗಿದ ಕಳ್ಳನೊಬ್ಬ 60 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾನೆ. ಶಿವಮೊಗ್ಗದ ತ್ಯಾವರೆಚಟ್ನಹಳ್ಳಿಯ ಪೇಸ್‌ ಪಿಯು ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಕಚೇರಿ ಒಳಗಿದ್ದ 60 ಸಾವಿರ ರೂ. ಕಳ್ಳತನವಾಗಿರುವ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ವೈದ್ಯ ಮೋಹನ್‌ ನಿಧನ, ಸ್ವಗೃಹದಲ್ಲಿ ಅಂತಿಮ ದರ್ಶನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment