ಹಾಯ್‌ ಹೊಳೆ ರಸ್ತೆಯ್ಲಲಿ ವಾಹನ ತಪಾಸಣೆ, ಇಬ್ಬರು ಅರೆಸ್ಟ್‌ | ಬೆಳಗೆ ಮನೆ ಬಾಗಿಲು ತೆಗೆದ ಯುವಕನಿಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MARCH 2024

ಕಿಯಾ ಶೋ ರೂಂಗೆ 38 ಲಕ್ಷ ರೂ. ವಂಚನೆ

SHIMOGA : ಹಳೆ ಕಾರು ಖರೀದಿಸಿ ಗ್ರಾಹಕರಿಗೆ ಹೊಸ ಕಾರು ಮಾರಾಟ ಮಾಡುವ ಎಕ್ಸ್‌ಚೇಂಜ್‌ ಆಫರ್‌ ನೆಪದಲ್ಲಿ ಶಿವಮೊಗ್ಗದ ಕಿಯಾ ಶೋ ರೂಂಗೆ 38.35 ಲಕ್ಷ ರೂ. ವಂಚಿಸಲಾಗಿದೆ. ಗ್ರಾಹಕರಿಂದ ಹಳೆ ಕಾರು ಖರೀದಿಗೆ ಸಂಸ್ಥೆಯೊಂದರ ಜೊತೆಗೆ ಕಿಯಾ ಶೋ ರೂಂ ಒಪ್ಪಂದ ಮಾಡಿಕೊಂಡಿತ್ತು. ಆ ಸಂಸ್ಥೆ ಕಾನೂನು ಬಾಹಿರವಾಗಿ ಹಳೆ ಕಾರುಗಳನ್ನು ಖರೀದಿಸಿ, ಕಿಯಾ ಶೋ ರೂಂಗೆ ನಷ್ಟ ಉಂಟು ಮಾಡಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಶ್ನೆ ಮಾಡಿದಾಗ ಕಿಯಾ ಶೋ ರೂಂ ಸಿಬ್ಬಂದಿಗೆ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಹನ ತಪಾಸಣೆ, ನಾಲ್ಕು ಗೋವುಗಳ ರಕ್ಷಣೆ

SHIMOGA : ಖಚಿತ ಮಾಹಿತಿ ಮೇರೆಗೆ ವಾಹನ ತಡೆದು ತಪಾಸಣೆ ನಡೆಸಿದ ಪೊಲೀಸರು ಮೂರು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗ – ಹಾಯ್‌ ಹೊಳೆ ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಅನುಮತಿ ಇಲ್ಲದೆ ನಾಲ್ಕು ಗೋವುಗಳ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ವಧೆ ಮಾಡುವ ಉದ್ದೇಶದಿಂದ ಗೋವುಗಳನ್ನು ಕೊಂಡೊಯ್ಯುತ್ತಿರುವುದಾಗಿ ತನಿಖೆ ವೇಳೆ ಗೊತ್ತಾಗಿದೆ. ಸಯ್ಯದ್‌ ಮೆಹಬೂಬ್‌ ಮತ್ತು ಫಕ್ರುದಿನ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಗೋವುಗಳು ಮತ್ತು ಗೂಡ್ಸ್‌ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಮುಂದೆ ನಿಲ್ಲಿಸಿದ್‌ ಬೈಕ್‌ ಕಳ್ಳತನ

SHIKARIPURA : ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನ ಮಾಡಲಾಗಿದೆ. ಶಿಕಾರಿಪುರ ವಿನಾಯಕ ನಗರದ ಸಿದ್ದೇಶ್‌ ಎಂಬುವವರಿಗೆ ಸೇರಿದ ಪಲ್ಸರ್‌ ಎನ್‌.ಎಸ್‌ 200‌ ಬೈಕ್‌ ಕಳ್ಳತನವಾಗಿದೆ. ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್‌ ಇರಲಿಲ್ಲ ಎಂದು ಆರೋಪಿಸಲಾಗಿದೆ. ಶಿಕಾರಿಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಸ್ತ್ರಾಸ್ತ್ರಗಳನ್ನು ಪೊಲೀಸ್‌ ಠಾಣೆಗೆ ಒಪ್ಪಿಸುವಂತೆ ಸೂಚನೆ, ಕೆಲವರಿಗೆ ಆದೇಶದಿಂದ ವಿನಾಯಿತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment