ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 MARCH 2024
SHIMOGA : ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಖಾಸಗಿ ಕಂಪನಿಯೊಬ್ಬರ ಉದ್ಯೋಗಿಯೊಬ್ಬರಿಗೆ ಸೇರಿದ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ಕಳ್ಳತನವಾಗಿದೆ. ಹತ್ತು ನಿಮಿಷದ ಮೊದಲು ಇದ್ದ ಬ್ಯಾಗ್ ಬಸ್ ನಿಲ್ದಾಣದ ತಲುಪಿದಾಗ ನಾಪತ್ತೆಯಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ತೀರ್ಥಹಳ್ಳಿ ತಾಲೂಕು ಕಮ್ಮರಡಿಯ ನೇಸರ ಎಂಬುವವರಿಗೆ ಸೇರಿದ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಕಳುವಾಗಿದೆ.
ಘಟನೆ ಸಂಭವಿಸಿದ್ದು ಹೇಗೆ?
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನೇಸರ, ಕಮ್ಮರಡಿಗೆ ತೆರಳಬೇಕಿತ್ತು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಆಗಮಿಸಿದ್ದರು. ಬೆಳಗಿನ ಜಾವ 4 ಗಂಟೆಗೆ ಬಸ್ಸು ನ್ಯೂ ಮಂಡ್ಲಿ ಸರ್ಕಲ್‌ಗೆ ಬಂದಾಗ ನೇಸರ ತಮ್ಮ ಪಕ್ಕದಲ್ಲಿ ಇಟ್ಟುಕೊಂಡಿದ್ದ ಲ್ಯಾಪ್‌ಟಾಪ್ ಬ್ಯಾಗ್ ಗಮನಿಸಿದ್ದರು. 4.10ಕ್ಕೆ ಬಸ್ಸು ನಿಲ್ದಾಣಕ್ಕೆ ತಲುಪಿದಾಗ ಲ್ಯಾಪ್‌ಟಾಪ್ ಬ್ಯಾಗ್ ನಾಪತ್ತೆಯಾಗಿತ್ತು.
ಬ್ಯಾಗಿನಲ್ಲಿ ಹೆಚ್‌ಪಿ ಕಂಪನಿಯ ಲ್ಯಾಪ್‌ಟಾಪ್, ವಿವೋ ಮೊಬೈಲ್ ಫೋನ್ ಇತ್ತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಇದನ್ನೂ ಓದಿ – ನವುಲೆ ಬಳಿ ಭೀಕರ ಅಪಘಾತ, ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು | ನಿದಿಗೆ ಬಳಿ ಹಳ್ಳಕ್ಕೆ ಉರುಳಿದ ಲಾರಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















