ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ಶ್ರದ್ಧಾ, ಭಕ್ತಿಯಿಂದ ಪಾಲ್ಗೊಂಡ ಭಕ್ತರು

SHIVAMOGGA LIVE NEWS | 26 MARCH 2024 (ಈ ಸುದ್ದಿಯನ್ನು ಇನ್ನು 37 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ದುರ್ಗಿಗುಡಿಯ ಶ್ರೀ ದುರ್ಗಮ್ಮ, ಶ್ರೀ ಮರಿಯಮ್ಮ ದೇವರ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಸೋಮವಾರ ರಥೋತ್ಸವ ಆಯೋಜಿಸಲಾಗಿತ್ತು.

ಸಾಮಾನ್ಯವಾಗಿ ರಥೋತ್ಸವಗಳು ಬೆಳಗ್ಗೆ ಅಥವಾ ಸಂಜೆ ಹೊತ್ತಿಗೆ ನಡೆಯುತ್ತವೆ. ಆದರೆ ಶ್ರೀ ದುರ್ಗಮ್ಮ, ಶ್ರೀ ಮರಿಯಮ್ಮ ದೇವಿ ರಥೋತ್ಸವ ಮಧ್ಯಾಹ್ನ ನಡೆಯುವುದು ವಿಶೇಷ. ಭಕ್ತರು ದರ್ಶನ ಪಡೆಯಲು ಅನುವಾಗಲಿ ಎಂದು ರಾತ್ರಿ 11 ಗಂಟೆವರೆಗೆ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ರಥ ನಿಲ್ಲಿಸಲಾಗಿತ್ತು. ದೊಡ್ಡ ಸಂಖ್ಯೆ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇನ್ನು, ರಥೋತ್ಸವದ ಸಂದರ್ಭ ಅನ್ನಸಂತರ್ಪಣೆ, ಮಜ್ಜಿಗೆ, ನೀರು, ಪಾನಕ ವಿತರಣೆ ಮಾಡಲಾಯಿತು. ದುರ್ಗಿಗುಡಿಯಲ್ಲಿ ರಥೋತ್ಸವದ ಬಳಿಕ ಶಿವಮೊಗ್ಗ ನಗರದಲ್ಲಿ ಹೋಳಿ ಹಬ್ಬ ಆಚರಿಸುವುದು ವಾಡಿಕೆ.

ಇದನ್ನೂ ಓದಿ – ಕೋಟೆ ಮಾರಿಕಾಂಬ ಜಾತ್ರೆ ಕುರಿತು ನಿಮಗೆಷ್ಟು ಗೊತ್ತು? ಇಲ್ಲಿದೆ 10 ಪ್ರಮುಖ ಪಾಯಿಂಟ್‌

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Durgamma-Mariyamma-devi-rathotsava-in-Durgigudi-Shimoga

Leave a Comment