ಶಿವಮೊಗ್ಗದಲ್ಲಿ ಇವತ್ತಿನಿಂದ ಮೂರು ದಿನ ನಾಟಕೋತ್ಸವ, ಯಾವ್ಯಾವ ನಾಟಕ ಪ್ರದರ್ಶನವಾಗಲಿದೆ? ಇಲ್ಲಿದೆ ಪಟ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 MARCH 2024

SHIMOGA : ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘದ ವತಿಯಿಂದ ಮಾರ್ಚ್ 26 ರಿಂದ 28ರ ವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗ ರಂಗಹಬ್ಬ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕಾಂತೇಶ್ ಕದರಮಂಡಲಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂತೇಶ್‌ ಕದರಮಂಡಲಗಿ, ಮೂರು ದಿನಗಳು ನಾಟಕೋತ್ಸವ ನಡೆಯಲಿದೆ. ಸಂಘದ ವತಿಯಿಂದ ಆಯೋಜಿಸುತ್ತಿರುವ 20ನೇ ನಾಟಕೋತ್ಸವ ಇದಾಗಿದೆ ಎಂದರು.

ಯಾವೆಲ್ಲ ನಾಟಕ ಪ್ರದರ್ಶನವಾಗಲಿದೆ?

ಮಾರ್ಚ್‌ 26 ರಂದು ಸಂಜೆ 6.45ಕ್ಕೆ ನಾ. ಶ್ರೀನಿವಾಸ್ ಅವರು ರಚಿಸಿರುವ ಗಾಂಧಿ ಕನ್ನಡಕ ನಾಟಕವನ್ನು ಲವ ಜಿ.ಆರ್. ನಿರ್ದೇಶನದಲ್ಲಿ ಸಹ್ಯಾದ್ರಿ ಕಲಾತಂಡವು ಪ್ರದರ್ಶಿಸಲಿದೆ.

ಮಾ. 27ರಂದು ಸಂಜೆ 6.45ಕ್ಕೆ ರಂಗಬೆಳಕು ತಂಡವು ಶಿವಕುಮಾರ್ ಮಾವಲಿ ಅವರ ಪ್ರೇಮಪತ್ರದ ಆಫೀಸು ಮತ್ತು ಇತರೆ ಕತೆಗಳು ಹಾಗೂ ಷೇಕ್ಸ್ ಪಿಯರ್ ಅವರ ಕೃತಿ ಆಧರಿಸಿದ ಒಲವಿನ ಜಂಕ್ಷನ್ ನಾಟಕವನ್ನು ಅಜಯ್ ನೀನಾಸಂ ಅವರ ನಿರ್ದೇಶನದಲ್ಲಿ ಅಭಿನಯಿಸಲಿದೆ.

ಮಾ. 28ರಂದು ಸಂಜೆ 6.45ಕ್ಕೆ ಹೊಂಗಿರಣ ತಂಡವು ಸಾಸ್ವೆಹಳ್ಳಿ ಸತೀಶ್ ಅವರ ನಿರ್ದೇಶನದಲ್ಲಿ ಮಹಿಳಾ ಭಾರತ ನಾಟಕ ಪ್ರದರ್ಶಿಸಲಿದೆ. ಈ ನಾಟಕ ಫ್ರೆಂಚ್ ಮೂಲ ಕೆ. ಮಾಧವನ್ ಅವರದ್ದಾಗಿದೆ. ಕನ್ನಡಕ್ಕೆ ಅಭಿಲಾಷಾ ಎಸ್. ಅನುವಾದಿಸಿದ್ದಾರೆ

ಒಂದು ನಾಟಕಕ್ಕೆ ಒಬ್ಬರಿಗೆ 50 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ರಂಗಗೀತೆಗಳ ಗಾಯನ ಕಾರ್ಯಕ್ರಮವೂ ಇರಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್‌, ಡಾ.ಸಾಸ್ವೆಹಳ್ಳಿ ಸತೀಶ್‌, ಎಸ್‌.ಹೆಚ್‌.ಸುರೇಶ್‌, ಡಾ. ಜಿ.ಆರ್‌.ಲವ ಇದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಫ್ಯಾಷನ್‌ ಶೋ | ಇಸ್ಕಾನ್‌ನಿಂದ ಬೇಸಿಗೆ ಶಿಬಿರ | ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಮಹಾಸಭೆಗೆ ದಿನಾಂಕ ಫಿಕ್ಸ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 26, 2024

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

Leave a Comment