ಗೀತಾ ಶಿವರಾಜ್‌ ಕುಮಾರ್‌ ಪ್ರಚಾರ ಬಿರುಸು, ಎಲ್ಲೆಲ್ಲಿ ಹೇಗಿದೆ ಜನರ ರೆಸ್ಪಾನ್ಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 MARCH 2024

SHIMOGA : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪ್ರಚಾರ ಕಾರ್ಯ ಬಿರುಸುಗೊಳಿಸಿದ್ದಾರೆ. ಕಳೆದ ಮೂರು ದಿನದಿಂದ ವಿವಿಧ ತಾಲೂಕುಗಳಲ್ಲಿ ಹಳ್ಳಿ ಹಳ್ಳಿ ಸುತ್ತಲು ಆರಂಭಿಸಿದ್ದಾರೆ. ಮೊದಲ ಹಂತದ ಕ್ಯಾಂಪೇನ್‌ ಪ್ಲಾನ್‌ ಸಿದ್ಧವಾಗಿದ್ದು, ಅದರಂತೆ ಪ್ರಚಾರ ನಡೆಸುತ್ತಿದ್ದಾರೆ.

ಎಲ್ಲೆಲ್ಲಿ ಹೇಗಿದೆ ಜನ ಬೆಂಬಲ?

ಶಿವಮೊಗ್ಗದ ಸಂತೆ ಕಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ತೀರ್ಥಹಳ್ಳಿಯಲ್ಲಿ ನಡೆದ ಸಭೆಯಲ್ಲೂ ಗೀತಾ ಶಿವರಾಜ್‌ ಕುಮಾರ್‌ ಅವರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಗರ, ಹೊಸನಗರ, ಹೊಳೆಹೊನ್ನೂರಿನಲ್ಲಿ ನಡೆದ ಸಭೆಯಲ್ಲಿಯು ಕಾರ್ಯಕರ್ತರು, ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದು, ಕಾಂಗ್ರೆಸ್‌ ಪಕ್ಷದಲ್ಲಿ ಉತ್ಸಾಹ ಮೂಡಿಸಿದೆ.

ಇನ್ನೂ ಮೂರು ದಿನ ನಿರಂತರ ಪ್ರಚಾರ

ಕ್ಷೇತ್ರವಾರಿ ಪ್ರಚಾರ ನಡೆಸುತ್ತಿರುವ ಗೀತಾ ಶಿವರಾಜ್‌ ಕುಮಾರ್‌ ಇನ್ನೂ ಮೂರು ದಿನ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಮಾ.26ರಂದು ಭದ್ರಾವತಿ, ಶಿಕಾರಿಪುರ, ಮಾ.27ರಂದು ಸೊರಬ, ಶಿವಮೊಗ್ಗ ಗ್ರಾಮಾಂತರ, ಮಾ.28ರಂದು ಬೈಂದೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.

ಜನ ಸೇವೆಗೆ ಅವಕಾಶ ದೊರೆತಿದೆ

ಪ್ರಚಾರ ಸಭೆಗಳಲ್ಲಿ ಗೀತಾ ಶಿವರಾಜ್‌ ಕುಮಾರ್‌ ಅವರು ತಮ್ಮ ತಂದೆ ಬಂಗಾರಪ್ಪ ಅವರ ಹಾದಿಯಲ್ಲಿ ಸಾಗುವ ಭರವಸೆ ನೀಡುತ್ತಿದ್ದಾರೆ. ‘ನನಗೆ ಜನಸೇವೆ ಮಾಡುವ ಆಸೆ ಚಿಕ್ಕವಳಿದ್ದಾಗಿಂದಲೇ ಇತ್ತು. ಆದರೆ, ಅವಕಾಶ ಸಿಕ್ಕಿರಲಿಲ್ಲ. ಈಗ ಜನಸೇವೆ ಮಾಡುವ ಅವಕಾಶ ದೊರೆತಿದೆ. ಈ ಆಸೆಯನ್ನು ಸಾಕಾರ ಗೊಳಿಸಿದಲ್ಲಿ ಜನರ ದನಿಯಾಗಿರುತ್ತೇನೆ. ನನ್ನ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮಾಡಿದ ಜನಪರ ಸಾಧನೆಗಳು ಜನರ ಮನಸ್ಸಿನಲ್ಲಿವೆ. ಅವರ ಹಾದಿಯಲ್ಲಿ ಸಾಗಲು ಬಯಸಿದ್ದೇನೆ.ʼ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ – ‘ಇಲ್ಲಿ ಯಾರು ನಮ್ಮವರು?’ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 26, 2024

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

Leave a Comment