ಜ್ಯೋತಿಷ್ಯ ಕೇಳಲು ಕರೆ ಮಾಡಿದ ಶಿವಮೊಗ್ಗದ ಮಹಿಳೆಗೆ ಎದುರಾಯ್ತು ದೊಡ್ಡ ಸಂಕಷ್ಟ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 MARCH 2024

SHIMOGA : ಯು ಟ್ಯೂಬ್‌ನಲ್ಲಿ ಪ್ರಸಾರವಾದ ಜ್ಯೋತಿಷ್ಯದ ಜಾಹೀರಾತು ನಂಬಿ ಶಿವಮೊಗ್ಗದ ಮಹಿಳೆಯೊಬ್ಬರು 9.44 ಲಕ್ಷ ರೂ. ಮೋಸ ಹೋಗಿದ್ದಾರೆ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಯು ಟ್ಯೂಬ್‌ ಜಾಹೀರಾತಿನಲ್ಲಿ ಕಾಣಿಸಿದ ಮೊಬೈಲ್‌ ನಂಬರ್‌ಗೆ ಕರೆ ಮಾಡಿ ಹಣ ಕಳೆದುಕೊಂಡಿದ್ದಾರೆ.

ವಂಚನೆ ಆಗಿದ್ದು ಹೇಗೆ?

Shivamogga Live Shivamogga Logo 1ಶಿವಮೊಗ್ಗದ ಮಹಿಳೆಯೊಬ್ಬರು (ಹೆಸರು, ಸ್ಥಳ ಗೌಪ್ಯ) ಯು ಟ್ಯೂಬ್‌ನಲ್ಲಿ ಜ್ಯೋತಿಷ್ಯದ ಜಾಹೀರಾತು ಗಮನಿಸಿ, ಅದರಲ್ಲಿರುವ ಮೊಬೈಲ್‌ ನಂಬರ್‌ಗೆ ಕರೆ ಮಾಡಿದ್ದರು. ಜ್ಯೋತಿಷಿ ಬಳಿ ಫೋನ್‌ನಲ್ಲಿ ಸಮಸ್ಯೆ ಹೇಳಿಕೊಂಡಿದ್ದರು. ಸಮಸ್ಯೆ ಪರಿಹಾರಕ್ಕೆ ಪೂಜೆ ಮಾಡಿಸಲು 251 ರೂ. ಗೂಗಲ್‌ ಪೇ ಮಾಡುವಂತೆ ಆತ ತಿಳಿಸಿದ್ದ. ನಂಬಿದ ಮಹಿಳೆ ಹಣ ಕಳುಹಿಸಿದ್ದರು. ಆ ಬಳಿಕ ನಾನಾ ಕಾರಣಗಳನ್ನು ಹೇಳಿ ಆತ ಒಟ್ಟು 6.37 ಲಕ್ಷ ರೂ. ಹಣ ಪಡೆದಿದ್ದ. ಆ ನಂತರ ಕರೆ ಮಾಡಿದಾಗ ‘ತನಗೆ ಅಪಘಾತವಾಗಿ ಕೋಮಾಗೆ ಹೋಗಿದ್ದೆ. ಈಗ ದೇವಸ್ಥಾನದ ಆಡಳಿತವನ್ನು ಮತ್ತೊಬ್ಬರಿಗೆ ವಹಿಸಲಾಗಿದೆ. ಅವರು ತಮ್ಮ ಹಣ ಹಿಂತಿರುಗಿಸಲಿದ್ದಾರೆʼ ಎಂದು ಆತ ತಿಳಿಸಿದ್ದ.

ಮತ್ತೊಮ್ಮೆ ಲಕ್ಷ ಲಕ್ಷ ಪಡೆದರು

LIC-HOME-PRASHANTHಜ್ಯೋತಿಷಿ ನೀಡಿದ್ದ ಮತ್ತೊಂದು ಮೊಬೈಲ್‌ ನಂಬರ್‌ಗೆ ಕರೆ ಮಾಡಿದಾಗ ಆತ, ತಮ್ಮ ಹಣ ಹಿಂತಿರುಗಿಸಲು ಸ್ವಲ್ಪ ಖರ್ಚಾಗಲಿದೆ ಎಂದು ಮಹಿಳೆಗೆ ತಿಳಿಸಿದ್ದ. ನಂಬಿದ ಮಹಿಳೆ ಹಂತ ಹಂತವಾಗಿ 3.07 ಲಕ್ಷ ರೂ. ಹಣ ವರ್ಗಾಯಿಸಿದ್ದರು. ಆದರೆ ತಮ್ಮ ಹಣ ಹಿಂತಿರುಗದೆ ಇದ್ದಾಗ ವಂಚನೆಗೊಳಗಾಗಿರುವುದು ಅರಿವಾಗಿದೆ. ಶಿವಮೊಗ್ಗದ ಸಿಇಎನ್‌ ಠಾಣೆಗೆ ದೂರು ನೀಡಿದ್ದಾರೆ.

ಅಪರಿಚಿತರ ಜೊತೆ ವ್ಯವಹಾರ ಬೇಡ

ಸಾಮಾಜಿಕ ಜಾಲತಾಣದಲ್ಲಿ ಜ್ಯೋತಿಷ್ಯ, ಉದ್ಯೋಗ ಸೇರಿದಂತೆ ವಿವಿಧ ಬಗೆಯ ಜಾಹೀರಾತುಗಳನ್ನು ಪ್ರಕಟಿಸಿ ವಂಚಕರು ಅಮಾಯಕರನ್ನು ಬಲೆಗೆ ಕೆಡವಿಕೊಳ್ಳುತ್ತಿದ್ದಾರೆ. ಲಕ್ಷಾಂತರ ರೂ. ವಂಚಿಸುತ್ತಿದ್ದಾರೆ. ಅಪರಿಚಿತರ ಜೊತೆಗೆ ಹಣಕಾಸು ವ್ಯವಹಾರ ನಡೆಸುವಾಗ ಎಚ್ಚರ ವಹಿಸಬೇಕಿದೆ. ಇಲ್ಲವಾದಲ್ಲಿ ಹಣ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವಂತಾಗುತ್ತದೆ.

ಇದನ್ನೂ ಓದಿ – ಬೆಂಗಳೂರು ಬಾಂಬ್‌ ಸ್ಪೋಟ ಕೇಸ್‌, ತೀರ್ಥಹಳ್ಳಿಯಲ್ಲಿ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 27, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment