ಶಿವಮೊಗ್ಗದ ಗಾಂಧಿ ಬಜಾರ್‌, ಹೊಸನಗರದ ತೋಟದ ಮನೆ ಮೇಲೆ ಬೆಂಗಳೂರು ಲೋಕಾಯುಕ್ತರಿಂದ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 MARCH 2024

SHIMOGA : ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ ಒಬ್ಬರಿಗೆ ಸೇರಿದ ಮನೆಯಲ್ಲಿ ಪರಿಶೀಲನೆ ನಡೆಸಲಾಯಿತು.

ಗಾಂಧಿ ಬಜಾರ್‌ನ ಕರಿದೇವರ ಕೇರಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು. ಬೆಂಗಳೂರಿನಿಂದ ಆಗಮಿಸಿರುವ ಎಂಟು ಮಂದಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಹೊಸನಗರದಲ್ಲೂ ಪರಿಶೀಲನೆ

ಇನ್ನು, ಹೊಸನಗರದ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದರು. ಉತ್ತರ ಕನ್ನಡ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಯೊಬ್ಬರಿಗೆ ಸೇರಿದ ತೊಟದ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನಿಂದ ಬಂದಿರುವ ಲೋಕಾಯುಕ್ತ ಅಧಿಕಾರಿಗಳೆ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ – ಬೆಂಗಳೂರು ಬಾಂಬ್‌ ಸ್ಪೋಟ ಕೇಸ್‌, ತೀರ್ಥಹಳ್ಳಿಯಲ್ಲಿ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment