ಜಯಮ್ಮಳನ್ನು ಕೊಂದು, ಬೇಲಿ ಕಂಬಕ್ಕೆ ಹಗ್ಗ ಬಿಗಿದು, ಮೃತದೇಹ ಕೆರೆಗೆ ಎಸೆದವನು ಅರೆಸ್ಟ್‌, ಹತ್ಯೆಗೆ ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 APRIL 2024

HOSANAGARA : ಕೊಟ್ಟ ಹಣ ಮರಳಿಸುವಂತೆ ಕೇಳಿದ ಮಹಿಳೆಯ ಕೊಲೆ ಮಾಡಿ ಮೃತದೇಹವನ್ನು ಕೆರೆಗೆ ಎಸೆಯಲಾಗಿದೆ. ತನಿಖೆ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ್ನು ವಶಕ್ಕೆ ಪಡೆಯಲಾಗಿದೆ.

ಕೆರೆಯಲ್ಲಿ ತೇಲುತ್ತಿತ್ತು ಜಯಮ್ಮನ ಶವ

ರಿಪ್ಪನ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದ ಮುತ್ತಿನ ಕೆರೆಯಲ್ಲಿ ಮಾ.18ರಂದು ಮಹಿಳೆಯೊಬ್ಬರ ಮೃತದೇಹ ತೇಲುತ್ತಿತ್ತು. ಮೃತದೇಹವನ್ನು ಕೆರೆಯಿಂದ ಹೊರ ತೆಗೆದು ವಾರಸುದಾರರ ಪತ್ತೆಗೆ ಮೆಗ್ಗಾನ್‌ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಹೊನ್ನಾಳಿಯ ಸಿದ್ದಪ್ಪ ಎಂಬುವವರು ಮೃತದೇಹವನ್ನು ಪರಿಶೀಲಿಸಿ ತಮ್ಮ ಅತ್ತೆ ಹೊಳಲೂರಿನ ನಿವಾಸಿ ಜಯಮ್ಮ ಎಂದು ಗುರುತಿಸಿದ್ದರು.

ಗುರುತು ಪತ್ತೆ ಬಳಿಕ ತನಿಖೆ ಚುರುಕು

ತನಿಖೆ ಚುರುಕುಗೊಳಿಸಿದ ಪೊಲೀಸರು ಕೋಡೂರು ಯಳಗಲ್ಲು ಗ್ರಾಮದ ನಿವಾಸಿ ಕೆ.ಕೆ.ಮಯೂರ (24) ಎಂಬಾತನನ್ನು ಬಂಧಿಸಿದ್ದಾರೆ. ಈತನ ಜೊತೆಗೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಮಯೂರನ ಅತ್ತೆ ಕೆಲಸ ಮಾಡುತ್ತಿದ್ದ ಆಶ್ರಮದಲ್ಲಿ ಜಯಮ್ಮ ಕೂಡ ಕೆಲಸ ಮಾಡುತ್ತಿದ್ದರು. ಅತ್ತೆಯ ಕಡೆಯಿಂದ ಜಯಮ್ಮ ಪರಿಚಯವಾಗಿದ್ದರು. ಅವರಿಂದ ಮೂಯೂರ ಸಾಲ ಪಡೆದಿದ್ದ. ಕೆಲ ಸಮಯದ ಬಳಿಕ ಸಾಲದ ಹಣ ಮರಳಿಸುವಂತೆ ಜಯಮ್ಮ ಕೇಳಿದ್ದರು. ಜಯಮ್ಮಳ ಬಳಿ ಹಣ ಮತ್ತು ಚಿನ್ನಾಭರಣವಿದೆ ಎಂದು ಭಾವಿಸಿ, ಆಕೆಯ ಹತ್ಯೆ ಮಾಡಿದರೆ ಹಣ, ಚಿನ್ನ ತನ್ನದಾಗಿಸಿಕೊಳ್ಳಬಹುದು. ಸಾಲದ ಕಿರಿಕಿರಿ ತಪ್ಪಲಿದೆ ಎಂದು ಕೊಲೆಗೈದಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸೈಟ್‌ ತೋರಿಸುವುದಾಗಿ ನಂಬಿಸಿ ಕರೆದೊಯ್ದರು

ಜಯಮ್ಮಳಿಗೆ ಮಯೂರ ಮತ್ತು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ರಿಪ್ಪನ್‌ಪೇಟೆಯಲ್ಲಿ ಸೈಟ್‌ ಕೊಡಿಸುವುದಾಗಿ ನಂಬಿಸಿದ್ದರು. ಮಾ.16ರಂದು ಕಾರಿನಲ್ಲಿ ಆಕೆಯನ್ನು ಕರೆದೊಯ್ದಿದ್ದರು. ಬಾಳೂರು ಗ್ರಾಮದ ಸಮೀಪ ಜಯಮ್ಮಳ ಕುತ್ತಿಗೆಗೆ ಹಿಂಬದಿಯಿಂದ ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. ನಂತರ ಕಲ್ಲಿನ ಬೇಲಿ ಕಂಬಕ್ಕೆ ಪ್ಲಾಸ್ಟಿಕ್‌ ಹಗ್ಗದಿಂದ ಬಿಗಿದು, ಹುಂಚದ ಮುತ್ತಿನ ಕೆರೆಯಲ್ಲಿ ಮೃತದೇಹ ಎಸೆದು ಪರಾರಿಯಾಗಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 ಇದನ್ನೂ ಓದಿ ಶಿವಮೊಗ್ಗದಲ್ಲಿ ಟೈರ್‌ ಸ್ಪೋಟ, ಸಿಟಿ ಬಸ್ಸಿನಲ್ಲಿ ಗುಂಡಿಯಾಗಿ ಕೆಳಗೆ ಬಿದ್ದ ಬಾಲಕಿ

ಡಿವೈಎಸ್‌ಪಿ ಗಜಾನನ ವಾಮನ ಸುತಾರ ಮೇಲ್ವಿಚಾರಣೆಯಲ್ಲಿ ಹೊಸನಗರ ಸರ್ಕಲ್‌ ಇನ್ಸ್‌ಪೆಕ್ಟರ್‌ ಗುರಣ್ಣ ಎಸ್‌.ಹೆಬ್ಬಾಳ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ನಿಂಗಪ್ಪ ಕರಕಣ್ಣ, ಸಿಬ್ಬಂದಿ ಕಿರಣ್‌ ಕುಮಾರ್‌, ಉಮೇಶ್‌, ಶಿವಕುಮಾರ ನಾಯ್ಕ, ಸಂತೋಷ್‌ ಕೊರವರ, ಸುನಿಲ್‌ ಅವರ ತಂಡ ತನಿಖೆ ನಡೆಸಿತ್ತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 1, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment