SHIVAMOGGA LIVE NEWS | 1 APRIL 2024
ELECTION NEWS : ಪ್ರಚಾರ ಕಾರ್ಯ ಬಿರುಸುಗೊಳಿಸಿರುವ ಬಿಜೆಪಿ, ಸೈನ್ಸ್ ಮೈದಾನದಲ್ಲಿ ನಗರದ ಘಟಕದಿಂದ ಪೇಜ್ ಪ್ರಮುಖರ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು.
ರಾಘವೇಂದ್ರ ಏನೆಲ್ಲ ಹೇಳಿದರು?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ವಿಶ್ವಮಟ್ಟದಲ್ಲಿ ಬೆಳೆದು ನಿಂತಿದೆ. ಸ್ವಾತಂತ್ರ್ಯಾ ನಂತರ ನಾವೆಲ್ಲರೂ ಗೌರವದಿಂದ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ಮೋದಿ ಆಡಳಿತವೇ ಕಾರಣ. 60 ವರ್ಷಕ್ಕೂ ಅಧಿಕ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶವನ್ನು ದುಸ್ಥಿತಿಗೆ ತಳ್ಳಿತ್ತು. ಆದರೆ ಕಳೆದ 10 ವರ್ಷದಲ್ಲಿ ನಮ್ಮ ಸರ್ಕಾರ ಆರೋಗ್ಯ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರದಲ್ಲೂ ಸಾಕಷ್ಟು ಅಭಿವೃದ್ಧಿ ಮಾಡಿದೆ.
ಕಳೆದ ಒಂದೂವರೆ ವರ್ಷದಲ್ಲಿ ಪ್ರಧಾನಿ ಅವರು ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಸೇರಿ ಮೂರು ಬಾರಿ ಶಿವಮೊಗ್ಗಕ್ಕೆ ಬಂದಿದ್ದಾರೆ. ಅಂತಹ ಒಬ್ಬ ಮಹಾನ್ ನಾಯಕನನ್ನು ಇಲ್ಲಿಗೆ ಕರೆಸಿಕೊಂಡಿದ್ದೇವೆ ಎಂದರೆ ಅದು ಇಲ್ಲಿನ ಕಾರ್ಯಕರ್ತರು ಮತ್ತು ಮಣ್ಣಿಗಿರುವ ಶಕ್ತಿ. ದೇಶದ ಸುರಕ್ಷತೆಗಾಗಿ ಮೋದಿ ಅವರು ಅನಿವಾರ್ಯ.
ಶಿವಮೊಗ್ಗದಲ್ಲಿ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರಿಗೆ ನಮ್ಮವರೇ ಬೆದರಿಕೆ ಹಾಕುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ನಮ್ಮವರೇ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ತಾಯಿ ಹಾಲು ಕುಡಿದು ಬಂದಿರುವ ಬಿಜೆಪಿ ಕಾರ್ಯಕರ್ತರು ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಜೆಡಿಎಸ್ ಮತ್ತು ಬಿಜೆಪಿ ಮನಸ್ಸುಗಳು ಒಂದಾಗಿ ಈ ಬಾರಿ ಚುನಾವಣೆಯ ತೇರನ್ನು ಒಟ್ಟಾಗಿ ಎಳೆಯುತ್ತಿದ್ದೇವೆ. ಮುಂದಿನ 30 ರಿಂದ 35 ದಿನ ಶ್ರಮ ಹಾಕಿ ಕೆಲಸ ಮಾಡಿದರೆ ಗೆಲುವಿಗೆ ಸಹಕಾರಿ ಆಗಲಿದೆ.
ಇದನ್ನೂ ಓದಿ – ಶಿವಮೊಗ್ಗದ ಮೊದಲ ಸಂಸದ ಯಾರು ಗೊತ್ತಾ? ಬ್ರಿಟೀಷರಿಗೆ ಅವರನ್ನು ಕಂಡರೆ ಮುಖ ಕೆಂಪಾಗುತ್ತಿದ್ದದ್ದು ಯಾಕೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200