ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 APRIL 2024
SAGARA : ಶರಾವತಿ ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿದ ಆರೋಪದ ಮೇಲೆ ಮೂವರನ್ನು ಕಾರ್ಗಲ್ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಾಳೆಕೊಪ್ಪದ ಸತೀಶ್ (39), ಯಡೆಹಳ್ಳಿ ಟಿ.ನಾಗರಾಜ (23) ಮತ್ತು ಪ್ರಜ್ವಲ್ (23) ಬಂಧಿತರು.
ಅಂಬಾರಗೋಡ್ಲು ಗ್ರಾಮದ ಶರಾವತಿ ಹಿನ್ನೀರಿನ ಅಂಚಿನಲ್ಲಿ ನಾಡ ಬಂದೂಕಿನಿಂದ ಜಿಂಕೆ ಬೇಟೆಯಾಡಿ ಮಾಂಸವನ್ನು ಪಾಲು ಮಾಡಿಕೊಳ್ಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಜಿಂಕೆ ಚರ್ಮ, ತಲೆ, ಬಂದೂಕು ವಶಕ್ಕೆ ಪಡೆಯಲಾಗಿದೆ.
ವಲಯ ಅರಣ್ಯಾಧಿಕಾರಿ ಸಂಧ್ಯಾ, ಉಪ ವಲಯ ಅರಣ್ಯಾಧಿಕಾರಿ ಜಿ.ಕೆ. ಸುಧಾಕರ್, ಮೋಜಣಿದಾರ, ಸಿಬ್ಬಂದಿ ಮಹೇಶ್, ವಲನಪಾಲಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಕೂಡಲಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರು ಪಾಲು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






