ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 APRIL 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತು ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ವತಿಯಿಂದ ಆಯೋಜಿಸಿದ್ದ ಯುಗಾದಿ ಉತ್ಸವದಲ್ಲಿ ಇಬ್ಬರು ಭಾಗಿಯಾಗಿದ್ದರು.
ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಶಾಲೆ ಆವರಣದಲ್ಲಿ ಯುಗಾದಿ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಭಾಗಿಯಾಗಿದ್ದರು. ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮುಖ ನೋಡ್ಲಿಲ್ಲ, ಮಾತಿಲ್ಲ, ಕತೆಯಿಲ್ಲ
ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾದರೂ ಬಿ.ವೈ.ರಾಘವೇಂದ್ರ ಮತ್ತು ಕೆ.ಎಸ್.ಈಶ್ವರಪ್ಪ ಪರಸ್ಪರ ಎದುರಾಗಲಿಲ್ಲ. ಸಂಸದ ರಾಘವೇಂದ್ರ ಒಂದು ಬದಿಯಲ್ಲಿ ಕುಳಿತಿದ್ದರು. ಮತ್ತೊಂದು ಬದಿಯಲ್ಲಿ ಈಶ್ವರಪ್ಪ ಆಸೀನರಾಗಿದ್ದರು. ಯುಗಾದಿ ಉತ್ಸವ ಕಾರ್ಯಕ್ರಮದ ಬಳಿಕ ಆರ್ಎಸ್ಎಸ್ ಮುಖಂಡರು, ಕಾರ್ಯಕರ್ತರು ಶುಭಾಷಯ ವಿನಿಮಯ ಮಡಿಕೊಂಡು, ಬೇವು ಬೆಲ್ಲ ಹಂಚಿದರು. ಈ ಸಂದರ್ಭ ರಾಘವೇಂದ್ರ ಮತ್ತು ಈಶ್ವರಪ್ಪ ದೂರ ದೂರವೆ ಉಳಿದು ಕಾರ್ಯಕ್ರಮದಿಂದ ಮರಳಿದರು.
‘ಸಂಸದ, ನಾಯಕ ಎಂದು ಭಾಗಿಯಾಗಿಲ್ಲ’
ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ‘ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸುತ್ತೇನೆ. ಸಂಸದ, ನಾಯಕನಾಗಿ ಅಲ್ಲ ಸ್ವಯಂ ಸೇವಕನಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಬಿ.ವೈ.ವಿಜಯೇಂದ್ರ ಅವರು ಕಳೆದ ಎರಡು ದಿನ ಶಿಕಾರಿಪುರದಲ್ಲಿ 16ಕ್ಕೂ ಹೆಚ್ಚು ಪ್ರಚಾರ ಸಭೆ ನಡೆಸಿದರು. ಶಿಕಾರಿಪುರ ಕ್ಷೇತ್ರದಲ್ಲೂ ಹೆಚ್ಚು ಮತಗಳು ಬಿಜೆಪಿಗೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ 400 ಸ್ಥಾನದಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡಿದೆ. ಯುಗಾದಿ ಹೇಗೆ ಮರಳಿ ಬರುತ್ತದೆಯೋ ಹಾಗೇ ಮತ್ತೆ ಮತ್ತೆ ಮೋದಿ ಪ್ರಧಾನಿ ಆಗಲಿದ್ದಾರೆ’ ಎಂದರು.
‘ಸ್ವಯಂ ಸೇವಕನಾಗಿ ಭಾಗಿ’
ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮಾತನಾಡಿ, ‘ರಾಷ್ಟ್ರೀಯ ಸ್ವಯಂಸೇವಕ ಸಂಘ ಜನ್ಮ ತಾಳಿದ್ದು ಯುಗಾದಿ ದಿನ. ಹಿಂದೂ ಸಮಾಜಕ್ಕೆ ಯುಗಾದಿ ಹಬ್ಬ ವಿಶೇಷ ಹಬ್ಬ. ಎಲ್ಲ ಹಿಂದೂಗಳು ಒಂದಾಗಬೇಕು ಎಂಬ ಸ್ಪೂರ್ತಿ ಕೊಡುವ ಹಬ್ಬ ಯುಗಾದಿ. ಹಾಗಾಗಿ ಯುಗಾದಿ ಉತ್ಸವದಲ್ಲಿ ಸ್ವಯಂಸೇವಕನಾಗಿ ಪಾಲ್ಗೊಂಡಿದ್ದೇನೆ’ ಎಂದರು.
ಇದನ್ನೂ ಓದಿ – ʼಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಮತ್ತೊಮ್ಮೆ ಗ್ಯಾರಂಟಿ ಕಾರ್ಡ್ʼ, ಈ ಬಾರಿ ಯಾರ ಸಹಿ ಇರುತ್ತೆ?