‘ಎರಡೇ ವಾರದಲ್ಲಿ ಈಶ್ವರಪ್ಪ ಮಾತು ಬದಲಿಸಿದ್ದೇಕೆ, ನಮ್ಮ ಕುಟುಂಬವನ್ನು ಪ್ರಶ್ನಿಸುತ್ತಿರುವುದೇಕೆ?ʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 APRIL 2024

BENGALURU : ರಾಘವೇಂದ್ರ ಅವರು ಐದು ಲಕ್ಷ ಲೀಡ್‌ನಲ್ಲಿ ಗೆಲ್ಲಬೇಕು ಎಂದು ಈ‍ಶ್ವರಪ್ಪ ಅವರು ಹೇಳಿದ್ದರು. ಕೇಂದ್ರದಲ್ಲಿ ಸಚಿವರಾಗಬೇಕು ಎಂದು ಭಾಷಣ ಮಾಡಿದ್ದರು. ಆದರೆ ಎರಡೇ ವಾರದಲ್ಲಿ ನಮ್ಮ ಕುಟುಂಬ ಮತ್ತು ಹಿಂದುತ್ವದ ಕುರಿತು ಪ್ರಶ್ನೆ ಮಾಡಿದ್ದಾರೆ ಎಂದು ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು.  

ರಾಘವೇಂದ್ರ ಭಾಷಣದ 3 ಪ್ರಮುಖಾಂಶ

ಬೆಂಗಳೂರಿನಲ್ಲಿ ಖಾಸಗಿ ಹೊಟೇಲ್‌ನಲ್ಲಿ ಶಿವಮೊಗ್ಗ ಕ್ಷೇತ್ರದ ಮತದಾರರ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ರಾಘವೇಂದ್ರ, ಈಶ್ವರಪ್ಪ ಅವರು ಬಂಡಾಯ ಸ್ಪರ್ಧೆ ಮಾಡುತ್ತಿದ್ದಾರೆ. ಅವರು ಬಳಸುತ್ತಿರುವ ಪದಗಳನ್ನು ಜನ ಗಮನಿಸುತ್ತಿದ್ದಾರೆ. ಅದನ್ನೆಲ್ಲ ಆಶೀರ್ವಾದ ಎಂದು ಭಾವಹಿಸುತ್ತೇನೆ. ಅವರಂತೆ ನಾನೂ ಪತ್ರಿಕಾಗೋಷ್ಠಿ ಮಾಡಬಹುದು. ಅದೇ ಪದಗಳನ್ನು ಉಪಯೋಗಿಸಬಹುದು. ಆದರೆ ಈ‍ಶ್ವರಪ್ಪ ಅವರು ಹಿರಿಯರ ಸ್ಥಾನದಲ್ಲಿದ್ದಾರೆ ಎಂದು ತಿರುಗೇಟು ನೀಡಿದರು.

ಮೋದಿ ಅವರಿಗಿಂತಲು ಹಿಂದುತ್ವ ಬೇಕ. ಯಡಿಯೂರಪ್ಪ ಅವರು ಶಿಕಾರಿಪುರಕ್ಕೆ ಆರ್‌ಎಸ್‌ಎಸ್‌ ಪ್ರಚಾರಕರಾಗಿ ಬಂದಿದ್ದರು. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈದ್ಗಾ ಮೈದಾನ ಹೋರಾಟ, ಕಾಶ್ಮೀರದ ಲಾಲ್‌ ಚೌಕದಲ್ಲಿ ತ್ರಿವರ್ಣ ಧ್ವಜ ಹಾರಾಟ, ರಾಮ ಮಂದಿರಕ್ಕಾಗಿ ಕರಸೇವೆ ಮಾಡಿದ್ದರು. ಹಿಂದುತ್ವ ಅನ್ನುವುದು ಜಾಹೀರಾತು ಅಲ್ಲ. ಅದು ನಮ್ಮ ಜೀವನ ಶೈಲಿ. ನಮ್ಮ ರಕ್ತದಲ್ಲಿದೆ. ರಾಘವೇಂದ್ರ ಬಿಜೆಪಿಯ ಅಧಿಕೃತ ಅಭ್ಯರ್ಥಿ. ನಾನು ಗೆದ್ದರಷ್ಟೆ ಮೋದಿ ಅವರ ಪರವಾಗಿರುತ್ತದೆ. ಆದರೆ ಮೋದಿ ಅವರ ಫೋಟೊ ಬಳಸಿ ಗೆಲ್ಲಬಹುದು ಎಂದುಕೊಂಡರೆ ತಪ್ಪು ಎಂದರು.

ಶಿವಮೊಗ್ಗದಲ್ಲಿ ವೈಯಕ್ತಿಕ ಟೀಕೆಗಳನ್ನು ಮಾಡಿಕೊಂಡು ಪ್ರಚಾರ ನಡೆಸಲಾಗುತ್ತಿದೆ. ನಾನು ಹಿಂದೆ ಯಾವೆಲ್ಲ ಯೋಜನೆ ತಂದಿದ್ದೇನೆ. ಮುಂದೇನು ಮಾಡುತ್ತೇನೆ ಎಂಬುದರ ಕುರಿತು ಚರ್ಚೆ ನಡೆಸುತ್ತಿಲ್ಲ. ವಿರೋಧ ಮಾಡಲೇಬೇಕು ಎನ್ನುವ ವ್ಯಕ್ತಿಯ ಕೊನೆಯ ಅಸ್ತ್ರ ಅಪಪ್ರಚಾರ. ಕುವೆಂಪು ಸೇರಿದಂತೆ ಅನೇಕ ಹಿರಿಯರನ್ನು ನೀಡಿದ ನಾಡಿನಲ್ಲಿ ವೈಯಕ್ತಿಕ ಟೀಕೆಗೆ ಸೀಮಿತವಾಗಿರುವುದು ದುರದೃಷ್ಟ ಎಂದು ಬಿ.ವೈ.ರಾಘವೇಂದ್ರ ತಿಳಿಸಿದರು.

ಇದನ್ನೂ ಓದಿ – ‘ನಂದೇ ಒರಿಜಿನಲ್‌ ಬಿಜೆಪಿ, ನಾನು ಎ ಟೀಮ್‌, ಈಗ ನಾನು ಕಾಯುತ್ತಿರುವುದು ಒಂದೇ ವಿಷಯಕ್ಕೆ’

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 15, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment