ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 APRIL 2024
ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ ಹಿನ್ನೆಲೆ ಆಯೋಜಿಸಿದ್ದ ಮೆರವಣಿಗೆಯಲ್ಲಿ ಎಲ್‌ಎಡಿ ಸ್ಕ್ರೀನ್ ಬಿದ್ದು ಪತ್ರಕರ್ತ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಬೃಹತ್ ಎಲ್‌ಇಡಿ ಪರದೆಗಳ ಮೂಲಕ ಮೆರವಣಿಗೆಯ ನೇರ ಪ್ರಸಾರ ಮಾಡಲಾಗುತ್ತಿತ್ತು. ಕ್ಯಾಂಟರ್ ಲಾರಿಗಳಲ್ಲಿ ಎಲ್‌ಇಡಿ ಪರದೆಗಳನ್ನು ಇರಿಸಲಾಗಿತ್ತು. ಗಾಂಧಿ ಬಜಾರ್‌ನಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಎಲ್‌ಇಡಿ ಪರದೆ ಕೆಳಗೆ ಬಿದ್ದಿದೆ. ಈ ವೇಳೆ ವಾಹನದ ಪಕ್ಕದಲ್ಲಿ ನಡೆದು ಸಾಗುತ್ತಿದ್ದ ಟಿವಿ ವಾಹಿನಿ ಪತ್ರಕರ್ತ ವಿನಯ್ ಪುರದಾಳು ಮತ್ತು ಕಾಂಗ್ರೆಸ್ ಪಕ್ಷದ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದಾರೆ.
ಪತ್ರಕರ್ತ ವಿನಯ್ ಪುರದಾಳು ಅವರ ಬೆನ್ನಿಗೆ ಗಾಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಒಬ್ಬರ ತಲೆಗೆ ಪೆಟ್ಟು ಬಿದ್ದಿದೆ. ಮತ್ತೊಬ್ಬರ ಕಾಲಿಗೆ ಗಾಯವಾಗಿದೆ. ಕೂಡಲೆ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ, ಯಾರೆಲ್ಲ ಜೊತೆಗಿದ್ದರು?
LATEST NEWS
- ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

- ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

- 6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

- ₹50 ಪೆಟ್ರೋಲ್ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್

- ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು















