ಶಿವಮೊಗ್ಗದಲ್ಲಿ ಡಿ.ಕೆ.ಶಿವಕುಮಾರ್‌, ರೋಡ್‌ ಶೋನಲ್ಲಿ ಹೇಳಿದ್ದೇನು?

SHIVAMOGGA LIVE NEWS | 16 APRIL 2024

SHIMOGA : ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಬಾಲರಾಜ್‌ ಅರಸ್‌ ರಸ್ತೆಯಲ್ಲಿ ಮೆರವಣಿಗೆ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಪ್ರಣಾಳಿಕೆಯಲ್ಲಿ ಮಹಿಳೆಯರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ವಿಶೇಷಚೇತನರ ಅಭ್ಯುದಯಕ್ಕೆ ಒತ್ತು ನೀಡಲಾಗಿದೆ. ಮಾಜಿ ಸಿಎಂ ಬಂಗಾರಪ್ಪ ಕನುಸುಗಳಿಗೆ ಜೀವ ತುಂಬಲು ಗೀತಾ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದರು.

ಇದನ್ನೂ ಓದಿ – ವಿಐಎಸ್‌ಎಲ್‌ನ ಅಧಿಕಾರಿ ಶಿವಮೊಗ್ಗದ ಸಂಸದರಾಗಿದ್ದರು, ಹೇಗದು?

dk-Shivakumar-in-Shimoga-for-geetha-shivaraj-kumar-campaign.

Leave a Comment