ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 APRIL 2024
ELECTION NEWS : ಬಿ.ವೈ.ರಾಘವೇಂದ್ರ ಅವರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ. ಏ.18ರಂದು ಮೈತ್ರಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ ಸಲ್ಲಿಕೆ ಸಂದರ್ಭ ಹೆಚ್ಚಿನ ಸಂಖ್ಯೆಯ ಜನ ಸೇರಿಲಿದ್ದಾರೆ. ಎಲ್ಲರಲ್ಲಿಯು ಗೆಲುವಿನ ಸಂಭ್ರಮ ಕಾಣಲಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಏ.18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಸಂದರ್ಭ ಉಪಸ್ಥಿತರಿರಲಿದ್ದಾರೆ. ಜಿಲ್ಲೆಯ ವಿವಿಧೆಡೆಯ ಜೆಡಿಎಸ್ ಮುಖಂಡರು, ಬೂತ್ ಮಟ್ಟದ ಕಾರ್ಯಕರ್ತರು ಅಂದು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಪ್ರಚಾರ ಮಾಡಿದಲ್ಲೆಲ್ಲ ರಾಘವೇಂದ್ರ ಅವರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಾಗಾಗಿ ರಾಘವೇಂದ್ರ ಅವರ ಗೆಲುವನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಪ್ರಚಾರಕ್ಕೆ ಗ್ಯಾರಂಟಿ ಹೊರತು ಉಳಿದ್ಯಾವ ವಿಚಾರವು ಇಲ್ಲ. ಆದ್ದರಿಂದ ಕುಮಾರಸ್ವಾಮಿ ಅವರ ಹೇಳಿಕೆಗಳ ಕುರಿತು ಅಪಪ್ರಚಾರ ನಡೆಸಲಾಗುತ್ತಿದೆ. ಈಚೆಗೆ ಕುಮಾರಸ್ವಾಮಿ ನೀಡಿದ ಹೇಳಿಕೆಗೆ ತಪ್ಪು ಅರ್ಥ ನೀಡಲಾಗಿದೆ ಎಂದು ಆರೋಪಿಸಿದರು.
ಇನ್ನು, ತಮ್ಮ ಚುನಾವಣೆ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ ಮತ್ತು ಭದ್ರಾವತಿಯಲ್ಲಿ ಪ್ರಚಾರ ನಡೆಸಲಿದ್ದಾರ ಎಂದು ತಿಳಿಸಿದರು.
ಇದನ್ನೂ ಓದಿ – ರಾಘವೇಂದ್ರ ನಾಮಪತ್ರ, ಬೃಹತ್ ಮೆರವಣಿಗೆಗೆ ಪ್ಲಾನ್, ಯಡಿಯೂರಪ್ಪ, ಕುಮಾರಸ್ವಾಮಿ ಭಾಗಿ, ಯಾವಾಗ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






