ಶಿವಮೊಗ್ಗದಲ್ಲಿ ಕೊನೆ ದಿನ ದಾಖಲೆ ಪ್ರಮಾಣದ ನಾಮಪತ್ರ ಸಲ್ಲಿಕೆ, ಒಟ್ಟು ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 APRIL 2024

ELECTION NEWS : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ದಾಖಲೆ ಪ್ರಮಾಣದ ನಾಮಪತ್ರ ಸಲ್ಲಿಕೆಯಾಗಿದೆ. ಇವತ್ತು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ.

ಇವತ್ತು ಯಾರೆಲ್ಲ ನಾಮಪತ್ರ ಸಲ್ಲಿಸಿದರು?

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್.ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಶೇಖರಪ್ಪ ಹೆಚ್, ಹನುಮಂತಪ್ಪ, ಜಿ.ಜಯದೇವ ಸೇರಿದಂತೆ ಇಂದು ಒಟ್ಟು 14 ನಾಮಪತ್ರಗಳ ಸಲ್ಲಿಕೆಯಾಗಿದೆ.

ಒಟ್ಟು 38 ನಾಮಪತ್ರ 

 ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿದೆ. ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ – ಮುಂದುವರೆದ ಮಳೆ, ಶಿವಮೊಗ್ಗ ಜಿಲ್ಲೆ ಈಗ ಕೂಲ್‌ ಕೂಲ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment