ಶಿವಮೊಗ್ಗದಲ್ಲಿ ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 APRIL 2024

ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಒಟ್ಟು ಸಲ್ಲಿಕೆಯಾಗಿದ್ದ 38 ನಾಮಪತ್ರಗಳ ಪೈಕಿ 37 ನಾಮಪತ್ರಗಳನ್ನು ಪುರಸ್ಕರಿಸಲಾಗಿದೆ.

ಯಾರ ನಾಮಪತ್ರ ತಿರಸ್ಕೃತವಾಗಿದೆ?

ಇವತ್ತು ಅಧಿಕಾರಿಗಳು ನಾಮಪತ್ರಗಳ ಪರಿಶೀಲನೆ ನಡೆಸಿದರು. ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಬಾನ್‌ ಖಾನ್‌ ನಾಮಪತ್ರ ತಿರಸ್ಕೃತಗೊಂಡಿದೆ. ಇನ್ನು, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ. ಅವರನ್ನು ಪಕ್ಷೇತರ ಅಭ್ಯರ್ಥಿಗಳಾಗಿ ಪರಿಗಣಿಸಲಾಗಿದೆ.

ನಾಮಪತ್ರ ಪರಿಶೀಲನೆ ಬಳಿಕ 26 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಂಕವಿದೆ.

ಇದನ್ನೂ ಓದಿ – ‘ಎಲ್ಲರ ಮೇಲೆ ಕಣ್ಣಿಟ್ಟಿದ್ದೇವೆ, ಕೆಲಸ ಮಾಡದಿದ್ದರೆ ಬದಲಾವಣೆʼ, ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಉಸ್ತುವಾರಿಯಿಂದ ವಾರ್ನಿಂಗ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 20, 2024

Leave a Comment